ಚಿಕ್ಕಮಗಳೂರು: ‘ವೀರಶೈವ–ಲಿಂಗಾಯತ ಧರ್ಮ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳು ಒಟ್ಟಾಗಿ ಹೋದರೆ ಬಸವಣ್ಣನ ವಿಚಾರಧಾರೆ ಪಾಲನೆ ಮಾಡಿದಂತೆ ಆಗಲಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.

ವೀರಶೈವ– ಲಿಂಗಾಯತ ಸಮಾಜದಿಂದ ನಗರದಲ್ಲಿ ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ‘ಮೈತ್ರಾದೇವಿ, ಬಿ.ಎಸ್.ಯಡಿಯೂರಪ್ಪ ವೀರಶೈವ –ಲಿಂಗಾಯತ ಸಮುದಾಯ ಭವನ’ ಉದ್ಘಾಟಿಸಿ ಅವರು ಮಾತನಾಡಿದರು.

ವೀರಶೈವ–ಲಿಂಗಾಯತರು ಸೀಮಿತ ಆಲೋಚನೆಗಳನ್ನು ಬಿಟ್ಟು ಸಮಾಜದ ಬಗ್ಗೆ ಚಿಂತನೆ ನಡೆಸಬೇಕು. ಇದು ರಾಮ ನಡೆದ, ಕೃಷ್ಣ ಬೋಧಿಸಿದ, ಈಶ್ವರನ ತಪೋ ಭೂಮಿಯಾಗಿದೆ. ಎಲ್ಲರನ್ನೂ ಸಮಾನವಾಗಿ ಕಂಡಾಗ ಬಸವಣ್ಣನ ಆದರ್ಶ ಪಾಲನೆ ಮಾಡಿದಂತೆ ಆಗಲಿದೆ ಎಂದರು.

‘ನಮ್ಮ ಧರ್ಮ, ಸಂಸ್ಕೃತಿ, ಆಚಾರ– ವಿಚಾರಗಳು ಜಗತ್ತಿಗೆ ವಿಶೇಷ. ಇತ್ತೀಚಿನ ದಿನಗಳಲ್ಲಿ ವಿದೇಶಿಗರು ನಮ್ಮ ಸಂಸ್ಕೃತಿ ಅನುಕರಣೆ ಮಾಡಲು ಆರಂಭಿಸಿದ್ದಾರೆ. ಇದು ಹೆಮ್ಮೆಯ ವಿಷಯ’ ಎಂದು ಹೇಳಿದರು.

ಸಂಘಟಿತ ಪ್ರಯತ್ನದ ಫಲವಾಗಿ ಸಮುದಾಯ ಭವನ ನಿರ್ಮಾಣವಾಗಿದೆ. ಭವನವು ಕೇವಲ ಕಲ್ಲು–ಮಣ್ಣಿನ ಕಟ್ಟಡವಲ್ಲ. ಸೇವೆ, ಕಾಳಜಿ ಮತ್ತು ಚಿಕ್ಕಮಗಳೂರಿನ ವೀರಶೈವ –ಲಿಂಗಾಯತ ಸಮುದಾಯ ಏಕತೆಯ ಸಂಕೇತ. ಸಮಾಜದ ಎಲ್ಲ ಉಪಪಂಗಡಗಳು ಒಟ್ಟಾಗಿ ಮುನ್ನಡೆಯಬೇಕು ಎಂದು ತಿಳಿಸಿದರು.

ಹವಾಮಾನ ಮುನ್ಸೂಚನೆ ಪ್ರಕಾರ ಈ ಬಾರಿ ಮಳೆ ಕೊರತೆಯಾಗುವ ಸಾಧ್ಯತೆ ಇದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸರ್ಕಾರ ಎಚ್ಚರಿಕೆ ವಹಿಸುವ ಅಗತ್ಯ ಇದೆ. ಕೆರೆ, ಕಟ್ಟೆಗಳಲ್ಲಿ ಹೆಚ್ಚಿನ ನೀರು ಸಂಗ್ರಹ ಮಾಡಿಕೊಳ್ಳುವುದು ಸೂಕ್ತ ಎಂದರು.

ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಮಾತನಾಡಿ, ‘ದ್ವೇಷ, ಅಸೂಯೆಗಳಿಲ್ಲದ ವೈಚಾರಿಕ, ವೈಜ್ಞಾನಿಕ ಹಾಗೂ ಸಹಬಾಳ್ವೆಯ ತಳಹದಿಯಲ್ಲಿ ಸುಂದರ ಸಮಾಜ ನಿರ್ಮಾಣ ಮಾಡಬೇಕಿದೆ. ಅಸಮಾನತೆ, ಜಾತಿಯತೆ, ಕಂದಾಚಾರ, ಅಸ್ಪೃಶ್ಯತೆ ಇಲ್ಲದ ಸಮಾಜ ನಿರ್ಮಾಣಕ್ಕೆ ಬವಸಣ್ಣ ಆದಿಯಾಗಿ ಶರಣರು ಭುನಾದಿ ಹಾಕಿದ್ದಾರೆ’ ಎಂದರು.

ಸಂಘಟನೆಯಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ. ಎಲ್ಲಾ ಸಮುದಾಯಗಳಲ್ಲೂ ಇರವಂತೆ ವೀರಶೈವ –ಲಿಂಗಾಯತರಲ್ಲೂ ಬಡವರಿದ್ದಾರೆ. ಅವರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಮಹಾಸಭಾ ಶ್ರಮಿಸುತ್ತಿದೆ. ಸಮುದಾಯದ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಜಿಲ್ಲಾ ಮಟ್ಟದಲ್ಲಿ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಗಾಲ್ಫ್ ಕ್ಲಬ್ ಅಧ್ಯಕ್ಷ ಹಾಗೂ ಸಮುದಾಯಭವನಕ್ಕೆ ಕೊಡುಗೆ ನೀಡಿರುವ ದಾನಿ ಎ.ಬಿ.ಸುದರ್ಶನ್ ಮಾತನಾಡಿ, ‘ನಮ್ಮ ತಂದೆಯವರ ಕಾಲದಲ್ಲಿ ಭವನ ನಿರ್ಮಾಣಕ್ಕೆ ಜಾಗ ಮೀಸಲಿಡಲಾಗಿತ್ತು. ಈಗ ಭವನ ನಿರ್ಮಾಣವಾಗಿರುವುದು ಸಂತೋಷ ತಂದಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-126-2115745587

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.