ಹುಬ್ಬಳ್ಳಿ/ ಶಿವಮೊಗ್ಗ: ಕೊಯ್ನಾ ಜಲಾಶಯದಿಂದ 73,063 ಕ್ಯುಸೆಕ್ ನೀರು ಬಿಟ್ಟಿರುವ ಕಾರಣ ಮತ್ತೆ ಪ್ರವಾಹದ ಆತಂಕ ಸೃಷ್ಟಿಯಾಗಿದೆ. ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ– ಯಡೂರು ಸೇತುವೆ ಜಲಾವೃತವಾಗಿದೆ.

ಬೆಳಗಾವಿ, ಖಾನಾಪುರ, ಬೈಲಹೊಂಗಲ, ಹಿರೇಬಾಗೇವಾಡಿ, ರಾಮದುರ್ಗ, ಎಂ.ಕೆ. ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಹುಬ್ಬಳ್ಳಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಿದೆ. ಮಲಪ್ರಭಾ ಉಗಮಸ್ಥಾನವಾಗಿರುವ ಕಣಕುಂಬಿಯಲ್ಲಿ ಮಳೆ ಬೀಳುತ್ತಿದ್ದು, ನದಿ ಹರಿವು ಹೆಚ್ಚಳವಾಗಿದೆ. ನದಿ ತೀರದ ಗ್ರಾಮಗಳ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವೆಡೆ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ.

ಲಿಂಗನಮಕ್ಕಿ ಜಲಾಶಯದಿಂದ 75 ಸಾವಿರ ಕ್ಯುಸೆಕ್ ನೀರು ಹೊರಬಿಟ್ಟಿದ್ದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ನದಿ ತೀರದ ಗ್ರಾಮಸ್ಥರು ಪ್ರವಾಹದ ಭೀತಿಯನ್ನು ಎದುರಿಸುತ್ತಿದ್ದಾರೆ.

ಹೊಸನಗರ ತಾಲ್ಲೂಕಿನಲ್ಲಿ ಹೆಚ್ಚಿನ ಮಳೆ ಬೀಳುತ್ತಿದ್ದು, ಬಾಳೇಕೊಪ್ಪ ಹಾಗೂ ನಗರ ಸಂಪರ್ಕ ಕಲ್ಪಿಸುವ ರಸ್ತೆ ಕಡಿತಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಾಳೇಕೊಪ್ಪದ ಸರ್ಕಾರಿ ಶಾಲೆಗೆ ರಜೆ ನೀಡಲಾಗಿದೆ. ಸುತ್ತಾ ಸೇತುವೆ ಮುಳುಗಡೆಯಾಗಿದ್ದು, ಸುತ್ತಾ, ಬಾಳೇಕೊಪ್ಪ, ಟೆಂಕಬೈಲು, ಮಳಲಿ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸೊರಬ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಮಳೆಗೆ ಕುಸಿದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 181.80 ಮಿ.ಮೀ. ಮಳೆಯಾಗಿದ್ದು, ಸರಾಸರಿ 25.97 ಮಿ.ಮೀ. ಮಳೆ ದಾಖಲಾಗಿದೆ. ಜಿಲ್ಲೆಯ ಎಲ್ಲ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ಈಗಾಗಲೇ ಲಿಂಗನಮಕ್ಕಿ, ಭದ್ರಾ, ತುಂಗಾ ಜಲಾಶಯಗಳು ಭರ್ತಿಯಾಗಿವೆ.

ಲಿಂಗನಮಕ್ಕಿ ಜಲಾಶಯದಿಂದ 11 ಗೇಟ್‌ಗಳ ಮೂಲಕ44,000 ಕ್ಯುಸೆಕ್, ಭದ್ರಾ ಜಲಾಶಯದಿಂದ 9,001 ಕ್ಯುಸೆಕ್, ತುಂಗಾ ಜಲಾಶಯದಿಂದ 24,976 ಕ್ಯುಸೆಕ್ ನೀರು ಹೊರಬಿಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.