ಬೆಂಗಳೂರು: 19 ವರ್ಷದ ಯುವತಿ ಜೊತೆ 16 ವರ್ಷದ ಬಾಲಕನ ಮದುವೆ ಮಾಡಿರುವ ಘಟನೆ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕನನ್ನು ರಕ್ಷಿಸಿ ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿದೆ.

‘ಬಾಲಕನ ತಂದೆ–ತಾಯಿಯೇ ಮುಂದೆ ನಿಂತು ಯುವತಿ ಜೊತೆ ಮದುವೆ ಮಾಡಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮನೆಗೆ ಹೋಗಿ ವಿಚಾರಣೆ ನಡೆಸಿದ್ದರು. ಬಾಲ್ಯ ವಿವಾಹ ನಡೆದಿರುವುದು ಸಾಬೀತಾಗುತ್ತಿದ್ದಂತೆ, ಬಾಲಕನನ್ನು ರಕ್ಷಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಬಾಲ್ಯ ವಿವಾಹ ಸಂಬಂಧ ಇಲಾಖೆಯ ಮೇಲ್ವಿಚಾರಕಿ ಸ್ವರ್ಣಲತಾ ದೂರು ನೀಡಿದ್ದಾರೆ. ಯುವತಿ ಹಾಗೂ ಬಾಲಕನ ಪೋಷಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಮೂಲಗಳು ಹೇಳಿವೆ.

‘ಬಾಲಕನ ಪೋಷಕರು ಅಸ್ಸಾಂನವರು. 15 ವರ್ಷಗಳ ಹಿಂದೆ ನಗರಕ್ಕೆ ಬಂದು ಪುಟ್ಟೇನಹಳ್ಳಿಯಲ್ಲಿ ವಾಸವಿದ್ದಾರೆ. ಪೋಷಕರನ್ನು ಕಳೆದುಕೊಂಡಿರುವ ಯುವತಿ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಳು. ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಬಾಲಕನ ಪೋಷಕರು, ಮಗ ಅಪ್ತಾಪ್ತನೆಂಬುದು ಗೊತ್ತಿದ್ದರೂ ಆತನ ಜೊತೆ ಮದುವೆ ಮಾಡಿಸಿದ್ದಾರೆ. ಪೋಷಕರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.