ಸಂತ್ರಸ್ತ ಬಾಲಕಿ ’ಹೊಟ್ಟೆ ನೋವು’ ಎಂದು ಸ್ಥಳೀಯ ಆಸ್ಪತ್ರೆಗೆ ಹೋದಾಗ ವೈದ್ಯರು ಆಕೆ ಗರ್ಭಿಣಿ ಎಂಬುದನ್ನು ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಯುವಕನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ–2023ರ ಕಲಂ 64, ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಕಾಯ್ದೆಯ ಕಲಂ 5(ಜೆ) (ii) ಮತ್ತು 6 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿನ ಶಿಕ್ಷಾರ್ಹ ಅಪರಾಧಗಳಿಗಾಗಿ ನಗರ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ‘ಈ ಕುರಿತಂತೆ ನಗರದ ಶೀಘ್ರ ವಿಲೇವಾರಿ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಆರೋಪಿ ಈ ಅರ್ಜಿ ಸಲ್ಲಿಸಿದ್ದಾರೆ.
ಸಂತ್ರಸ್ತೆಯೇ ಸೆಟಲ್‌ಮೆಂಟ್ ಮಾಡಿಕೊಳ್ಳುತ್ತೇವೆ ಎಂದು ಹೇಳುವುದು ಎಷ್ಟು ಸರಿ? ಈ ರೀತಿಯ ಪ್ರಕರಣಗಳಲ್ಲಿ ಪೋಷಕರನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಆಡಳಿತಾಂಗ ಯಾವುದೇ ರಿಯಾಯತಿ ತೋರಬಾರದು.