ಕಲಬುರಗಿ: ಬಾಲಕಿಯನ್ನು ಮದುವೆಯಾದ ಯುವಕನಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡವನ್ನು ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ ವಿಧಿಸಿದೆ. ಜೊತೆಗೆ ಯುವಕ ಹಾಗೂ ಬಾಲಕಿಯ ತಂದೆ–ತಾಯಂದಿರಿಗೂ ತಲಾ ಒಂದು ವರ್ಷ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದೆ.

ಆಳಂದ ತಾಲ್ಲೂಕಿನ ಗುಳ್ಳೊಳ್ಳಿ ತಾಂಡಾದ ನಿತಿನ್ ನೀಲು ಪವಾರ (25) ಶಿಕ್ಷೆಗೆ ಒಳಗಾದ ಯುವಕ. ಬಾಲ್ಯವಿವಾಹ ನಿಷೇಧ ಕಾಯ್ದೆಯಡಿಯೂ ಈತನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಲಾಗಿದೆ.

ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಯುವಕನ ತಂದೆ ನೀಲು ಪವಾರ, ತಾಯಿ ಹಾಗೂ ಬಾಲಕಿಯ ತಂದೆ–ತಾಯಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜಿ. ಆದೇಶಿಸಿದ್ದಾರೆ.

2023ರ ಮೇ 17ರಂದು ಯುವಕನ ಮದುವೆಯು 16 ವರ್ಷದ ಬಾಲಕಿ ಜೊತೆಗೆ ಆಳಂದದ ಕಲ್ಯಾಣ ಮಂಟಪದಲ್ಲಿ ನೆರವೇರಿತ್ತು. ಬಾಲಕಿಗೆ 17 ವರ್ಷ ಆರು ತಿಂಗಳಿದ್ದಾಗ ಮಗುವಾಗಿತ್ತು. ಹೆರಿಗೆಗಾಗಿ ಆಸ್ಪತ್ರೆಗೆ ಹೋಗಿದ್ದಾಗ ಬಾಲ್ಯವಿವಾಹ ಪ್ರಕರಣ ಬೆಳಕಿಗೆ ಬಂದಿತ್ತು.

ಆಳಂದ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಶರಣಬಸಪ್ಪ ಕೋಡ್ಲಾ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕ (ಪೋಕ್ಸೊ) ಶಾಂತವೀರ ತುಪ್ಪದ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.