ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ಪುಸಲಾಯಿಸಿ ಗೋವಾ ಮತ್ತು ಮೀರಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಅಪರಾಧಿಗೆ 30 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ದೇಶನೂರಿನ ಲಕ್ಷ್ಮಣ ಮಾರುತಿ ಕರಗುಂದ (24) ಶಿಕ್ಷೆಗೆ ಗುರಿಯಾದವ. 2023ರ ಡಿಸೆಂಬರ್ 28ರಂದು ಬಾಲಕಿಯನ್ನು ಪುಸಲಾಯಿಸಿ ಬೈಕ್ ಮೇಲೆ ಹತ್ತಿಸಿಕೊಂಡು ಗೋವಾ ತೋರಿಸುವುದಾಗಿ ನಂಬಿಸಿ ಕರೆದುಕೊಂಡು ಹೋಗಿದ್ದ.

ಖಾನಾಪುರ ಮಾರ್ಗವಾಗಿ ಮೀರಜ್ಗೆ ಕರೆದೊಯ್ದು ಅಲ್ಲಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ. ನಂತರ ಗೋವಾಗೆ ಕರೆದೊಯ್ದು ಅಲ್ಲಿಯೂ ಅತ್ಯಾಚಾರ ಎಸಗಿದ್ದ ಎಂದು ಬಾಲಕಿಯ ಪಾಲಕರು ನೇಸರಗಿ ಠಾಣೆಗೆ ದೂರು ನೀಡಿದ್ದರು.

ತನಿಖಾಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ ಪುಷ್ಪಲತಾ ಅವರು 10 ಸಾಕ್ಷಿಗಳು, 71 ದಾಖಲೆಗಳು ಮತ್ತು 16 ಮುದ್ದೆಮಾಲುಗಳ ಆಧಾರದ ಮೇಲೆ ಶಿಕ್ಷೆ ಪ್ರಕಟಿಸಿದ್ದಾರೆ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ಪಡೆಯುವಂತೆಯೂ ಆದೇಶ ಮಾಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.