ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಆಯೋಗ–ಶಿಕ್ಷಣ ಇಲಾಖೆ ಜಟಾಪಟಿ

ಪರೀಕ್ಷಾ ಕೇಂದ್ರಗಳಿಗೆ ಭೇಟಿಯ ಅವಕಾಶ ನಿರಾಕರಣೆ
Published 1 ಏಪ್ರಿಲ್ 2024, 14:38 IST
Last Updated 1 ಏಪ್ರಿಲ್ 2024, 14:38 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲು ಅವಕಾಶ ನಿರಾಕರಿಸಿದ ವಿಷಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಮಧ್ಯೆ ಜಟಾಪಟಿಗೆ ನಾಂದಿ ಹಾಡಿದೆ.

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೊಠಡಿಯ ಒಳಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ,  ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಕುಳಿತು ವೆಬ್‌ಕಾಸ್ಟ್‌ ಮೂಲಕ ವೀಕ್ಷಣೆ ಮಾಡುತ್ತಿದ್ದಾರೆ. ಇದರಿಂದ ಪರೀಕ್ಷೆ ಬರೆಯುವ ಮಕ್ಕಳು ಹಾಗೂ ಶಿಕ್ಷಕರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಪರೀಕ್ಷಾ ಕೊಠಡಿಗಳ ಒಳಗೆ ಮಕ್ಕಳ ಸ್ನೇಹಿ ವಾತಾವರಣ ಇಲ್ಲವಾಗಿದೆ. ಇಷ್ಟೆಲ್ಲ ವ್ಯವಸ್ಥೆ ಇದ್ದರೂ ನಕಲು ಪ್ರಕರಣಗಳು ಹೇಗೆ ನಡೆಯುತ್ತಿವೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಿದೆ. ಇದರ ಆಧಾರದಲ್ಲಿ ಮುಂದಿನ ಪರೀಕ್ಷೆಗಳಲ್ಲಿ ಸುಧಾರಣೆ ತರಬಹುದಾಗಿದೆ. ಹಾಗಾಗಿ, ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ‘ಚೈಲ್ಡ್‌ ರೈಟ್‌ ಟ್ರಸ್ಟ್‌’ ನಿರ್ದೇಶಕ ನರಸಿಂಹ ಜಿ. ರಾವ್‌ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಪತ್ರ ಬರೆದಿದ್ದರು.

ಚೈಲ್ಡ್‌ ರೈಟ್‌ ಟ್ರಸ್ಟ್‌ ಪತ್ರ ಆಧರಿಸಿ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲು ಸದಸ್ಯರಿಗೆ ಸೂಚಿಸಿದ್ದರು. ಆದರೆ, ಭೇಟಿಗೆ ಅವಕಾಶ ನೀಡಲು ಶಿಕ್ಷಣ ಇಲಾಖೆ ಆಯುಕ್ತರು ನಿರಾಕರಿಸಿದ್ದಾರೆ.

‘ಆಯೋಗದ ಸದಸ್ಯರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುವ ಅವಕಾಶ ನಿರಾಕರಿಸುವುದು ನಿಯಮಗಳ ಉಲ್ಲಂಘನೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಗೆ ವಿರುದ್ಧ. ಹಾಗಾಗಿ, ಆಯುಕ್ತರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು’ ಎಂದು ಆಯೋಗದ ಸದಸ್ಯ ಕೆ.ಟಿ. ತಿಪ್ಪೇಸ್ವಾಮಿ ಆಯೋಗದ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT