ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಣಸಿನಕಾಯಿ ದರ ಕುಸಿತ | ವರದಿ ಆಧರಿಸಿ ಕ್ರಮ: ಪರಮೇಶ್ವರ

Published 11 ಮಾರ್ಚ್ 2024, 16:32 IST
Last Updated 11 ಮಾರ್ಚ್ 2024, 16:32 IST
ಅಕ್ಷರ ಗಾತ್ರ

ಬೆಂಗಳೂರು: ‘ಮೆಣಸಿನಕಾಯಿ ದರ ಒಂದೇ ದಿನದಲ್ಲಿ ಕ್ವಿಂಟಲ್‌ಗೆ ₹ 20 ಸಾವಿರದಿಂದ ₹ 8 ಸಾವಿರಕ್ಕೆ ಕುಸಿತವಾಗಿದೆ. ಒಂದೇ ದಿನದಲ್ಲಿ ₹ 12 ಸಾವಿರ ದರ‌ ಕುಸಿಯಲು ಕಾರಣವೇನು ಎಂಬುದನ್ನು ತಿಳಿದು ವರದಿ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು‌’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದರ ಕುಸಿತದ ಕಾರಣಕ್ಕೆ ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಗಲಾಟೆಯಾಗಿದೆ. ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಲಾಗಿದೆ. ಎಲ್ಲ‌‌ ಎಪಿಎಂಸಿ ಮಾರುಕಟ್ಟೆಗಳಲ್ಲಿ ದರ ಕುಸಿತ ಆಗಿದೆಯೇ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರವೇ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT