ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳ ಅಮಾನತು ರದ್ದು ಮಾಡಿರುವ ಕೇಂದ್ರ ಆಡಳಿತ ನ್ಯಾಯಮಂಡಳಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರ ಜತೆ ಮಾತನಾಡಿದ ಅವರು, ಸಿಎಟಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

‘ಸಿದ್ದರಾಮಯ್ಯ ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಶಾಸಕ ಬಿ.ಆರ್. ಪಾಟೀಲ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್. ಪಾಟೀಲ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದೆವು. ನಂತರ ನನಗೆ ಮುಖ್ಯಮಂತ್ರಿ ಅವಕಾಶ ದೊರೆತಿದೆ. ಈ ಅರ್ಥದಲ್ಲಿ ಅವರು ಹೇಳಿಕೆ ನೀಡಿರಬಹುದು’ ಎಂದು ಪ್ರತಿಕ್ರಿಯೆ ನೀಡಿದರು.
.Bengaluru Stampede: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.