ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿ ನಾಯಿಗಳಿಗೆ ಮೈಕ್ರೊಚಿಪ್‌: ಟೆಂಡರ್‌ ಪ್ರಶ್ನಿಸಿ ಪಿಐಎಲ್‌–ನೋಟಿಸ್‌

Published 9 ಮೇ 2024, 16:20 IST
Last Updated 9 ಮೇ 2024, 16:20 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋಚಿಪ್ ಅಳವಡಿಸುವ ನಿಟ್ಟಿನಲ್ಲಿ ಕರೆಯಲಾಗಿರುವ ಟೆಂಡರ್ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಟೆಂಡರ್‌ ಅಧಿಸೂಚನೆ ರದ್ದುಗೊಳಿಸುವಂತೆ ಕೋರಿ ಹೆಬ್ಬಾಳದ ಎಸ್‌.ಪ್ರಿಯದರ್ಶಿನಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಜಾಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಸ್‌.ಸುನಿಲ್ ದತ್‌ ಯಾದವ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಮೊಹಮ್ಮದ್‌ ಮುಜಾಸಿಮ್‌, ‘ಮೈಕ್ರೊಚಿಪ್‌ ಅಳವಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ. ಬೀದಿ ನಾಯಿಗಳ ಆರೋಗ್ಯ ಹಾಗೂ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ. ಆದ್ದರಿಂದ, ಟೆಂಡರ್ ಪ್ರಕ್ರಿಯೆ ರದ್ದುಗೊಳಿಸಬೇಕು’ ಎಂದು ಕೋರಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT