ಸಿರಿಗೆರೆ: ‘ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ಕೇಳಿದಷ್ಟು ಅನುದಾನ ನೀಡಿದ್ದರಿಂದ ಭರಮಸಾಗರ ಏತ ನೀರಾವರಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ. ತಾಲ್ಲೂಕಿನ 43 ಕೆರೆಗಳಲ್ಲಿ ನೀರು ತುಂಬಿದೆ’ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದರು.

ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಅಭಿಮಾನೋತ್ಸವದ ಅಂಗವಾಗಿ ಮಂಗಳವಾರ ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಯಡಿಯೂರಪ್ಪ ಅವರ ಕೊಡುಗೆ ಸ್ಮರಿಸುವುದು ಎಲ್ಲರ ಕರ್ತವ್ಯ. ಹೀಗಾಗಿ ಅಭಿಮಾನೋತ್ಸವಕ್ಕೆ ಈ ಭಾಗದ ಅಭಿಮಾನಿಗಳು ಸ್ವಯಂಪ್ರೇರಿತವಾಗಿ ಬರಬೇಕು’ ಎಂದು ಹೇಳಿದರು.

ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ. ಬಸವರಾಜ್, ಉಪಾಧ್ಯಕ್ಷ ಶೈಲೇಶ್ಕುಮಾರ್, ಮಂಜುನಾಥ, ಪ್ರವೀಣ್ಕುಮಾರ್, ಚಿಕ್ಕಬೆನ್ನೂರು ಗೌಡರ ತೀರ್ಥಪ್ಪ, ಕಲ್ಲೇಶ್, ಸಿದ್ದಬಸಣ್ಣ, ಕೆ.ಎನ್. ಮೋಹನ್, ರಾಜಣ್ಣ, ಪೆಟ್ರೋಲ್ ಬಸವರಾಜ್ ಹಾಗೂ ಭರಮಸಾಗರ ಮಂಡಲದ ಚುನಾಯಿತ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-44-10987902

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.