ಮೊಳಕಾಲ್ಮುರು: ‘ಚಿತ್ರದುರ್ಗದಲ್ಲಿ ಮೇ 9 ರಂದು ಆಯೋಜಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ರಾಜ್ಯ ಬಿಜೆಪಿಗೆ ಹೊಸ ಶಕ್ತಿ ತಂದುಕೊಡಲಿದೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ತಾಲ್ಲೂಕಿನ ಬಿ.ಜಿ.ಕೆರೆಯ ವಸುಂಧರಾ ಸಸ್ಯಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಅಭಿಮಾನೋತ್ಸವದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

‘6 ದಶಕಗಳವರೆಗೆ ಇಡೀ ರಾಜ್ಯವನ್ನು ಸುತ್ತಿ ಹಲವು ಸವಾಲುಗಳ ಮಧ್ಯೆಯೂ ಪಕ್ಷ ಸಂಘಟನೆ ಮಾಡಿದ ಪರಿಣಾಮ ನಾವು ಈಗ ನಾಯಕರಾಗಿ ಬೆಳೆಯಲು ಸಾಧ್ಯವಾಗಿದೆ. ಲಕ್ಷಾಂತರ ಮುಖಂಡರು ಹೆಮ್ಮೆಯಿಂದ ಓಡಾಡಲು ಯಡಿಯೂರಪ್ಪ ಕಾರಣ. ಅವರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಹೆಚ್ಚು ಜನ ಪಾಲ್ಗೊಳ್ಳಬೇಕು. ಸಮಾವೇಶವು ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿಯೂ ಆಗಲಿದೆ’ ಎಂದರು.

‘ಕಾಂಗ್ರೆಸ್ನವರು ನಡೆಸಿದ್ದ ಸಿದ್ದರಾಮೋತ್ಸವದ ಮಾದರಿಯಲ್ಲೇ ಯಡಿಯೂರಪ್ಪ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ರಾಜ್ಯ, ಹೊರ ರಾಜ್ಯಗಳಿಂದ ನೂರಾರು ಮಠಾಧೀಶರು, ಪಕ್ಷದ ಹಿರಿಯ ಮುಖಂಡರು, ಕೇಂದ್ರ ಗೃಹಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. 10 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಮೊಳಕಾಲ್ಮುರು ಕ್ಷೇತ್ರದಿಂದ ಕನಿಷ್ಟ 20,000 ಜನ ಭಾಗಿಯಾಗಬೇಕು. ಪ್ರತಿ ಗ್ರಾಮದಲ್ಲೂ ಪ್ರಚಾರ ಮಾಡಿ ಜನರನ್ನು ಕರೆತರಬೇಕು’ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಮಾಜಿ ಶಾಸಕರಾದ ನೇರ್ಲಗುಂಟೆ ತಿಪ್ಪೇಸ್ವಾಮಿ, ಕಂಪ್ಲಿ ಸುರೇಶ್, ಸಹ ಪ್ರಭಾರಿಗಳಾದ ಎ. ಮುರಳಿ, ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿದರು.

ಕ್ಷೇತ್ರಾಧ್ಯಕ್ಷರಾದ ಕೆ.ಟಿ. ಶ್ರೀರಾಮರೆಡ್ಡಿ, ಚನ್ನಗಾನಹಳ್ಳಿ ಮಲ್ಲೇಶ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ಎಂ. ಮಂಜುನಾಥ್, ವೆಂಕಟೇಶ್ ಯಾದವ್, ಹನುಮಂತೇಗೌಡ, ಪ್ರಭಾಕರ ಮ್ಯಾಸನಾಯಕ, ಕೆಎಎಸ್ ನಿವೃತ್ತ ಅಧಿಕಾರಿ ಎನ್. ರಘುಮೂರ್ತಿ, ಜಿಂಕಲು ಬಸವರಾಜ್, ಅನಿಲ್ ಕುಮಾರ್, ನೇರ್ಲಹಳ್ಳಿ ಪ್ರಭಾಕರ್, ಬಾಳೆಕಾಯಿ ರಾಮದಾಸ್, ಮೊಗಲಹಳ್ಳಿ ಸಿದ್ಧಾರ್ಥ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-44-1287676240

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.