ಚಿತ್ರದುರ್ಗ: ‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರ ಅನುಭವಿಸಿದ್ದಕ್ಕಿಂತ ಕಷ್ಟಪಟ್ಟಿದ್ದೇ ಹೆಚ್ಚು. ಹೋರಾಟ ಮನೋಭಾವದ ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿದರು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮೇ 9ರಂದು ನಡೆಯಲಿರುವ ‘ಬಿಎಸ್ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಅಂಗವಾಗಿ ನಗರದ ಹೊರವಲಯದಲ್ಲಿ ಸಿದ್ಧಗೊಳ್ಳುತ್ತಿರುವ ಬೃಹತ್ ವೇದಿಕೆ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿ ಶನಿವಾರ ಅವರು ಮಾತನಾಡಿದರು.

‘ಬಿಎಸ್ವೈ ರಾಜಕೀಯ ಕ್ಷೇತ್ರದಲ್ಲಿ 50 ವರ್ಷ ಪೂರೈಸಿದ್ದಾರೆ. ಸದಾ ಹೋರಾಟದ ದಾರಿಯಲ್ಲೇ ಸಾಗಿ ಬಂದ ಅವರು ಪ್ರತಿ ಹಂತದಲ್ಲೂ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದಾರೆ. ಈಗ ಅವರು ಚುನಾವಣಾ ರಾಜಕಾರಣದಿಂದ ದೂರವಿದ್ದಾರೆ. ಈಗಲೂ ರಾಜ್ಯದಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಹೋರಾಟದ ಮೂಲಕವೇ ಅವರು ಪಕ್ಷ ಸಂಘಟನೆ ಮಾಡಿದ್ದಾರೆ. ಮೇರು ವ್ಯಕ್ತಿತ್ವದ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಧೀಮಂತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ’ ಎಂದರು.

‘ರಾಜ್ಯ ಕಂಡ ಅಪ್ರತಿಮ ನಾಯಕನಿಗೆ ಗೌರವ ಸಲ್ಲಿಸಲೆಂದೇ ಆಯೋಜಿಸಿರುವ ಸಮಾರಂಭದಲ್ಲಿ ರಾಜ್ಯದ ಮೂಲೆ ಮೂಲೆಯಿಂದ, ಹೊರರಾಜ್ಯಗಳಿಂದ 10 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುತ್ತಿದ್ದಾರೆ. ನಾಡಿನ ವಿವಿಧ ಮಠಗಳ ನೂರಾರು ಮಠಾಧೀಶರು ಸಾನ್ನಿಧ್ಯ ವಹಿಸುತ್ತಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಬಹಳ ಸಂತೋಷದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದರು.

‘ಅಭಿಮಾನೋತ್ಸವವನ್ನು ಪಕ್ಷಾತೀತವಾಗಿ ಆಯೋಜಿಸುತ್ತಿದ್ದೇವೆ. ಯಾವುದೇ ಅಪೇಕ್ಷೆ ಇಲ್ಲದೇ ಸಾರ್ವಜನಿಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಯಡಿಯೂರಪ್ಪ ಅವರ ಬದುಕಿನಿಂದ ಪ್ರೇರಣೆ ಪಡೆದವರೇ ಆಗಿದ್ದಾರೆ. ಬೃಹತ್ ವೇದಿಕೆ ಸಿದ್ಧಗೊಳ್ಳುತ್ತಿದ್ದು, ಸಾರ್ವಜನಿಕರಿಗೆ ಸಕಲ ಸೌಲಭ್ಯ ಒದಗಿಸಲಾಗುವುದು’ ಎಂದು ಹೇಳಿದರು.

ಆರ್ಥಿಕ ಸ್ಥಿತಿ ಗಟ್ಟಿ: ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ಸ್ಥಿತಿ ತುಂಬಾ ಗಟ್ಟಿ ಇದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾದರೂ ಎಲ್ಲವನ್ನೂ ಶಿಸ್ತಿನಿಂದ ನಿರ್ವಹಿಸುತ್ತಿದ್ದೇವೆ. ಎಲ್ಲಾ ಸವಾಲು ಎದುರಿಸಲು ನಮ್ಮ ಸರ್ಕಾರ ತಯಾರಿ ಮಾಡಿಕೊಂಡಿದೆ. ಪ್ರಯತ್ನ ಪೂರ್ವಕವಾಗಿ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಿದೆ. ವಿರೋಧ ಪಕ್ಷದವರು ಏನೇ ಸುಳ್ಳು ಹೇಳಿದರೂ ಜನರು ಸತ್ಯವನ್ನು ಅರ್ಥ ಮಾಡಿಕೊಳ್ಳಲಿದ್ದಾರೆ’ ಎಂದರು.

‘ರಾಜ್ಯದಲ್ಲಿ ಮೂರು ಬಾರಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಏರಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಪೆಟ್ರೋಲ್ ದರ ಹೆಚ್ಚಳವಾಗಲಿದೆ ಎಂದು ನಾವು ಎಲ್ಲೂ ಹೇಳಿಲ್ಲ. ಜಾಗತಿಕ ಮಟ್ಟದಲ್ಲಿ ಸಮಸ್ಯೆಗಳಿದ್ದರೂ ಅವುಗಳನ್ನು ಪರಿಣಾಮಕಾರಿಯಾಗಿ ಎದುರಿಸುತ್ತಿದ್ದೇವೆ’ ಎಂದರು.

ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿಗಳಾದ ತಮ್ಮೇಶ್ಗೌಡ, ಶರಣ್ ತಳ್ಳಿಕೆರೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಮುಖಂಡರಾದ ಎ.ಮುರಳಿ, ಮಾಧುರಿ ಗಿರಿ, ಜಿ.ಎಚ್.ಮೋಹನ್ ಕುಮಾರ್, ಡಾ.ಮಂಜು, ಭಾರ್ಗವಿ ದ್ರಾವಿಡ್, ನಾಗರಾಜ ಬೇದ್ರೆ, ನಾಗರಾಜು, ಚಾಲುಕ್ಯ ನವೀನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-44-684557442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.