ಮೊಳಕಾಲ್ಮುರು: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಯಾವುದೇ ರೈತ, ಕಾರ್ಮಿಕ, ದಲಿತ ನಾಯಕರನ್ನು ಆಹ್ವಾನಿಸಿಲ್ಲ ಎಂದು ಸಂಘದ ರೈತಸಂಘ ಮತ್ತು ಹಸಿರುಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ದೂರಿದರು.

ಬುಧವಾರ ನಡೆದ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಅಭಿಮಾನೋತ್ಸವವು ಪಕ್ಷಾತೀತ, ಜಾತ್ಯತೀತ ಎಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿ ಮುಖಂಡರು ಮಾತ್ರ ಸಿದ್ಧತಾ ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 2028ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಅಭಿಮಾನೋತ್ಸವ ಪೂರಕವಾಗಿದೆ ಎಂದು ಹೇಳುತ್ತಿದ್ದಾರೆ. ಈ ಕಾರ್ಯಕ್ರಮದ ಹಿಂದೆ ದೊಡ್ಡ ಪ್ರಮಾಣದ ರಾಜಕೀಯ ಉದ್ದೇಶ ಅಡಗಿದೆ ಎಂದು ಅವರು ಆರೋಪಿಸಿದರು.

ಭದ್ರಾಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ, ಮದಕರಿ ನಾಯಕ ಥೀಂ ಪಾರ್ಕ್ ಸ್ಥಾಪನೆಗೆ ಅಮಿತ್ ಶಾ ನೀಡಿದ್ದ ಭರವಸೆಗಳು ಹುಸಿಯಾಗಿವೆ ಎಂದು ಹೇಳಿದರು. ಸಂಘದ ಮರ್ಲಹಳ್ಳಿ ರವಿಕುಮಾರ್, ಎಸ್.ರಾಜಣ್ಣ, ತಿಪ್ಪೇಸ್ವಾಮಿ, ಪಾಪಣ್ಣ, ರಮೇಶ್, ಶ್ರೀನಿವಾಸ್, ಶಿವಕುಮಾರ್, ಪಿ.ಟಿ. ಹಟ್ಟಿ ನಿಂಗಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-44-1071168529

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.