ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ವೀರೇಂದ್ರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಪುರಸ್ಕರಿಸಿ ಮಂಗಳವಾರ ಆದೇಶಿಸಿದ್ದಾರೆ.

ಅರ್ಜಿದಾರ ಕೆ.ಸಿ.ವೀರೇಂದ್ರ ಅವರು ₹5 ಲಕ್ಷ ಮೊತ್ತದ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಖಾತ್ರಿ ಒದಗಿಸುವುದೂ ಸೇರಿದಂತೆ ಸಾಂಪ್ರದಾಯಿಕ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
.ವೀರೇಂದ್ರಗೆ ಸೇರಿದ 40 ಕೆ.ಜಿ ಚಿನ್ನದ ಗಟ್ಟಿ ಇ.ಡಿ ವಶಕ್ಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.