ಚಿತ್ರದುರ್ಗ: ‘ಒಳ ಮೀಸಲಾತಿ ಜಾರಿಯಲ್ಲಿ ಉಂಟಾಗಿರುವ ಗೊಂದಲ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗ ಸರ್ಕಾರ ಕೈಗೊಂಡಿರುವ ನಿರ್ಧಾರ ಸುಪ್ರೀಂ ಕೋರ್ಟ್ ತೀರ್ಪು ಹಾಗೂ ನಾಗಮೋಹನ್ದಾಸ್ ಆಯೋಗದ ವರದಿಗೆ ವಿರುದ್ಧವಾಗಿದೆ’ ಎಂದು ರಾಜ್ಯ ಪರಿಶಿಷ್ಟ ಜಾತಿ, ಪಂಗಡದ ನೌಕರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಹಿರೇಹಳ್ಳಿ ಮಲ್ಲಿಕಾರ್ಜುನ್ ಆರೋಪಿಸಿದರು.

‘ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ದಿನದಿಂದಲೂ ಸರ್ಕಾರ ತೀರ್ಪಿನ ವಿರುದ್ಧ ನಡೆದುಕೊಳ್ಳುತ್ತಿದೆ. 15ಕ್ಕಿಂತ ಕಡಿಮೆ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದರೆ ಒಳ ಮೀಸಲಾತಿ ಅನ್ವಯಿಸುವುದಿಲ್ಲ. ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದು ನಿರ್ಣಯಿಸಲಾಗಿದೆ. ಎ, ಬಿ ವರ್ಗದ ನೌಕರಿಯಲ್ಲಿ ಒಳ ಮೀಸಲಾತಿ ತರಬಾರದೆನ್ನುವುದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಉದ್ದೇಶವಾಗಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಿದೆ. ಆದರೆ ಗೊಂದಲ ಬಗೆಹರಿಸಿಲ್ಲ. ನಾಗಮೋಹನ್ದಾಸ್ ಆಯೋಗದ ವರದಿ ವೈಜ್ಞಾನಿಕವಾಗಿದ್ದರೂ ಯಾರದೋ ಮಾತು ಕೇಳಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ದತ್ತಾಂಶ ಸಂಗ್ರಹಿಸಿ ಪರಿಶಿಷ್ಟರಲ್ಲಿಯೇ ಕಿತ್ತಾಟವಿಟ್ಟಿದ್ದಾರೆ. ವೈಜ್ಞಾನಿಕ, ವೈಚಾರಿಕ ನಿಲುವು ತೋರಿಸದ ಸರ್ಕಾರದ ನಡೆ ಖಂಡನೀಯ’ ಎಂದು ಜನತಂತ್ರ ಉಳಿಸಿ ಆಂದೋಲನದ ಸಂಚಾಲಕ ಸಿ.ಕೆ.ಮಹೇಶ್ ಕಿಡಿಕಾರಿದರು.

‘ವಿಶ್ವವಿದ್ಯಾಲಯಗಳಲ್ಲಿ ಸರ್ಕಾರಕ್ಕೆ ಒಳ ಮೀಸಲಾತಿ ಬೇಕಿಲ್ಲವೆನ್ನುವುದನ್ನು ನೋಡಿದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರು ಮನುವಾದಿಗಳು ಎನ್ನುವುದು ಗೊತ್ತಾಗುತ್ತದೆ’ ಎಂದರು.

‘ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಗೊಂಡಿರುವ ನಿರ್ಧಾರ ಕಾನೂನು ಬಾಹಿರ. ಒಳ ಮೀಸಲಾತಿ ಜಾರಿಗೆ ತರುವಾಗ ಆಯಾ ಜನಸಂಖ್ಯೆಗನುಗುಣವಾಗಿ ಪ್ರಾತಿನಿಧ್ಯ ಕಲ್ಪಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಧಿಕ್ಕರಿಸಲಾಗಿದೆ’ ಎಂದು ಸಾಮಾಜಿಕ ಸಂಘರ್ಷ ಸಮಿತಿ ಅಧ್ಯಕ್ಷ ಕೆ.ಕುಮಾರ್ ದೂರಿದರು.

ಮುಖಂಡರಾದ ಸಿ.ಪಿ.ಸುಧಾಕರ್, ಸಿ.ಎ.ಚಿಕ್ಕಣ್ಣ, ಡಿ.ದುರುಗೇಶ್, ರಾಮು ಗೋಸಾಯಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-44-1963064083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.