ಚಿತ್ರದುರ್ಗ: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಆ ಮೂಲಕ ರಾಜಕಾರಣ ಮಾಡುತ್ತಿದೆ’ ಎಂದು ಶಾಸಕ ಟಿ.ರಘುಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ‘2023ರಲ್ಲಿ ಪರಿಶಿಷ್ಟ ಜಾತಿಗೆ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ 3ರಿಂದ 7ಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗಿತ್ತು. ಈಚೆಗೆ ಹೈಕೋರ್ಟ್ನಲ್ಲಿ ದಾವೆ ಹೂಡಿರುವುದರಿಂದ ಮೀಸಲಾತಿ ಹೆಚ್ಚಳಕ್ಕೆ ತಡೆಯಾಗಿ ಸದ್ಯ ಹಳೆ ಮೀಸಲಾತಿ ಜಾರಿಯಲ್ಲಿದೆ. ರಾಜ್ಯ ಸರ್ಕಾರವು ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸಲು ಪ್ರಸ್ತಾವ ಕಳುಹಿಸಿದರೂ ಕೇಂದ್ರ ಸರ್ಕಾರ ಸ್ಪಷ್ಟ ನಿರ್ಣಯ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.

‘ರಾಜ್ಯ ಸರ್ಕಾರ ಪ್ರಸ್ತುತ 50,432 ಉದ್ಯೋಗ ಭರ್ತಿ ಮಾಡುತ್ತಿದೆ. ಈ ಸಂದರ್ಭದಲ್ಲಿ ಮೀಸಲಾತಿ ಶೇ 24ರಂತೆ ಭರ್ತಿ ಮಾಡಿದರೆ 14,543 ಹುದ್ದೆಗಳು ದೊರೆಯುತ್ತವೆ. ಹಳೇ ಮೀಸಲಾತಿ ಮೂಲಕ ಭರ್ತಿ ಮಾಡಿದರೆ 11,156 ಮಾತ್ರ ದೊರೆಯುವ ಜೊತೆಗೆ 3,087 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಉದ್ಯೋಗದಿಂದ ವಂಚಿತರಾಗುತ್ತಾರೆ. ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡಲಿ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರ ಬದುಕಲ್ಲಿ ಆಟವಾಡುವುದು ಬಿಟ್ಟು ಮೀಸಲಾತಿ ಹೆಚ್ಚಳವನ್ನು 9ನೇ ಪರಿಚ್ಛೇದಕ್ಕೆ ಸೇರಿಸಲಿ’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಸಂದರ್ಭದಲ್ಲಿ ಮುಖ್ಯಮಂತ್ರಿ ಆಗಿದ್ದ ಬಸವರಾಜ ಬೊಮ್ಮಾಯಿ ಸೇರಿ ಹಲವು ಸಚಿವರು ಈಗ ಸಂಸದರಾಗಿದ್ದಾರೆ. ಸದ್ಯ ಮೀಸಲಾತಿ ಸಮಸ್ಯೆಯಿಂದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಯ ಯುವಕರು ಮೆಡಿಕಲ್, ಎಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್ ಮತ್ತು ಉದ್ಯೋಗದಿಂದ ವಂಚಿತರಾಗುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದರು.

‘ಭದ್ರಾ ಮೇಲ್ದಂಡೆ ಯೋಜನೆಯಿಂದ ನಾಲ್ಕು ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಯೋಜನೆಗೆ ಕೇಂದ್ರ ಸರ್ಕಾರ ₹ 5,300 ಕೋಟಿ ಅನುದಾನ ನೀಡುವುದಾಗಿ ತಿಳಿಸಿತ್ತು. ಆದರೆ ಹಣ ನೀಡಿಲ್ಲ. ರಾಜ್ಯ ಬಜೆಟ್ನಲ್ಲಿ ಘೋಷಣೆ ಮಾಡಿರುವಂತೆ ಚಿತ್ರದುರ್ಗ ಶಾಖಾ ಕಾಲುವೆಯ 157 ಕೆರೆ ತುಂಬಿಸಲಾಗುವುದು. 2027-28ಕ್ಕೆ ಕಾಮಗಾರಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಅನುದಾನ ಒದಗಿಸಲು ಕ್ರಮ ವಹಿಸಬೇಕು’ ಎಂದರು.

‘ಕೇಂದ್ರದ ಗೃಹ ಸಚಿವರು 2018ರ ಚುನಾವಣೆಯಲ್ಲಿ ದುರ್ಗದಲ್ಲಿ ಮದಕರಿನಾಯಕರ ಕುರಿತ ಥೀಮ್ ಪಾರ್ಕ್ ಮಾಡುತ್ತೇವೆ ಎಂದು ಮಾತು ಕೊಟ್ಟು ಇಲ್ಲಿಯವರೆಗೂ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಚಳ್ಳಕೆರೆ ಕ್ಷೇತ್ರದ ಸಾಣಿಕೆರೆಯ 93 ಎಕರೆ ಜಾಗ ಮೀಸಲಿದ್ದು, ಕೃಷಿ ಸಂಶೋಧನಾ ಕೇಂದ್ರ ಮಾಡಬೇಕು. ಪ್ರತಿ ವರ್ಷ ದುರ್ಗೋತ್ಸವ ಆಚರಣೆ, ಅಡಿಕೆ ಮತ್ತು ತೆಂಗು ಬೆಳೆಗೆ ಪರಿಹಾರ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-44-648220007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.