ಚಿತ್ರದುರ್ಗ: ‘ಮಾರ್ಚ್ 27ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಅನ್ವಯಿಸಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಬಾರದು. ಒಳ ಮೀಸಲಾತಿ ನಿಗದಿ ಅವೈಜ್ಞಾನಿಕವಾಗಿದ್ದು, ಹಳೆ ಮೀಸಲಾತಿ ಅಡಿಯಲ್ಲೇ ನೇಮಕಾತಿ ನಡೆಸಬೇಕು’ ಎಂದು ಛಲವಾದಿ ಗುರುಪೀಠದ ಪೀಠಾಧ್ಯಕ್ಷ ಬಸವನಾಗಿದೇವ ಸ್ವಾಮೀಜಿ ಆಗ್ರಹಿಸಿದರು.

‘101 ಜಾತಿಗಳಲ್ಲಿ ಒಂದು ಸಮುದಾಯ ಮಾತ್ರ ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಿರುವ ಕಾರಣ ಮಾರ್ಚ್ 27ರಂದು ವಿಶೇಷ ಸಭೆ ಏರ್ಪಡಿಸಲಾಗಿದೆ. ಯಾವುದೇ ಕಾರಣಕ್ಕೂ ಅವೈಜ್ಞಾನಿಕವಾಗಿರುವ ಒಳ ಮೀಸಲಾತಿ ಹಂಚಿಕೆಯನ್ನು ಮಾನ್ಯ ಮಾಡಬಾರದು. ತಪ್ಪಿದ್ದಲ್ಲಿ ಮುಂದೆ ಆಗುವ ಎಲ್ಲಾ ಸಮಸ್ಯೆಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.

‘ಮಾರ್ಚ್ 25ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಒಳಮೀಸಲಾತಿ ರಹಿತ ಹಳೆ ಮೀಸಲಾತಿಯ ಜಾರಿಗಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಹೋರಾಟದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದಾರೆ. ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನಾಗಮೋಹನ ದಾಸ್ ಆಯೋಗದ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಲಾಗುವುದು’ ಎಂದು ಹೇಳಿದರು.

‘ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸುವ ಮೂಲಕ ಯಾವುದೇ ಉನ್ನತ ಹುದ್ದೆಗಳು ಸಿಗದಂತೆ ನೋಡಿಕೊಳ್ಳಲಾಗಿದೆ. ರೋಸ್ಟರ್ ಬಿಂದು ದೋಷಪೂರಿತವಾಗಿದೆ. ಮೀಸಲಾತಿ ಪ್ರಮಾಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಗೊಂದಲ ಸೃಷ್ಟಿಯಾಗಿದೆ’ ಎಂದರು.

‘ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಮುನ್ನ ಎಲ್ಲಾ ಸಮುದಾಯಗಳ ಸ್ವಾಮೀಜಿಗಳನ್ನು ಕರೆದು ಚರ್ಚೆ ನಡೆಸಬೇಕು. ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳ ಗುಂಪನ್ನು ಪಟ್ಟಿ ಮಾಡಬೇಕು. ನಾಗಮೋಹನ ದಾಸ್ ವರದಿಯಲ್ಲಿ ಉದ್ದೇಶಪೂರ್ವಕವಾಗಿ ಬಲಗೈ ಜನಸಂಖ್ಯೆಯನ್ನು ಕಡಿಮೆ ಮಾಡಲಾಗಿದ್ದು ಅದನ್ನು ಮರು ಪರಿಶೀಲಿಸಬೇಕು. ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಬೇಕು’ ಎಂದು ಒತ್ತಾಯಿಸಿದರು.

ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮುಖಂಡರಾದ ಓಂಕಾರಮೂರ್ತಿ, ವೈ.ತಿಪ್ಪೇಸ್ವಾಮಿ, ಎಚ್.ಶೇಷಪ್ಪ, ಅಣ್ಣಪ್ಪ, ರವೀಂದ್ರ, ರಾಮಕೃಷ್ಣ, ಛಲವಾದಿ ತಿಪ್ಪೇಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-44-1560324137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.