ಚಿತ್ತಾಪುರ: ‘ಬಂಜಾರ ಸಮಾಜದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಆ ಮೂಲಕ ಬಂಜಾರ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು’ ಎಂದು ಬಂಜಾರ ಸಮಾಜದ ಹಿರಿಯ ಮುಖಂಡ ಚಂದು ಜಾಧವ್, ಯುವ ಮುಖಂಡ ಜಗದೀಶ ಚವ್ಹಾಣ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಮಾಡಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಂಜಾರ ಸಮಾಜ ಎಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿದ್ದು, ಸಮಾಜದ ಏಕೈಕ ಶಾಸಕ ರುದ್ರಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು’ ಎಂದು ಅವರು ಒತ್ತಾಯಿಸಿದರು.

‘ಕ್ಷೇತ್ರದಲ್ಲಿ ಮೂರು ಸಲ ಶಾಸಕರಾಗಿ, ವಿವಿಧ ಖಾತೆಗಳ ಸಚಿವರಾಗಿ ಉತ್ತಮ ಕೆಲಸ ಮಾಡಿರುವ ಮತ್ತು ಜನಪರ ಯೋಜನೆ ಜಾರಿಗೆ ತಂದಿರುವ ಪ್ರಿಯಾಂಕ್ ಖರ್ಗೆ ಅವರು ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು’ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬಂಜಾರ ಸಮಾಜದ ತಾಲ್ಲೂಕು ಅಧ್ಯಕ್ಷ ಭೀಮಸಿಂಗ ಚವ್ಹಾಣ, ಪ್ರವೀಣ ಪವಾರ್, ರಾಕೇಶ ಪವಾರ್, ದೇವಿದಾಸ್ ಚವ್ಹಾಣ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-31-735482338

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.