ಬೆಂಗಳೂರು: ಯುವತಿಯರ ಸೋಗಿನಲ್ಲಿ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಅವರ ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ರಾಜಸ್ಥಾನದ ಗ್ಯಾಂಗ್ ಸಿಐಡಿ ಸೈಬರ್ ಪೊಲೀಸರ ಬಲೆಗೆ ಬಿದ್ದಿದೆ.

‘ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಕೃತ್ಯ ಎಸಗುತ್ತಿದ್ದ ರಾಜಸ್ಥಾನದ ಸಾಹುನ್, ಶಾರುಖ್ ಖಾನ್, ನಾಸೀರ್ ಹಾಗೂ ಸಹೀದ್ ಅನ್ವರ್ ಎಂಬುವರನ್ನು ಬಂಧಿಸಲಾಗಿದೆ. ಇದೊಂದು ವ್ಯವಸ್ಥಿತ ಗ್ಯಾಂಗ್’ ಎಂದು ಸಿಐಡಿ ಪೊಲೀಸ್ ಮೂಲಗಳು ಹೇಳಿವೆ.

‘ಸುಲಿಗೆ ಮಾಡುವುದನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ ಆರೋಪಿಗಳು, ಯಾವುದೋ ಯುವತಿಯರ ಫೋಟೊಗಳನ್ನು ಕದ್ದು ನಕಲಿ ಖಾತೆ ತೆರೆಯುತ್ತಿದ್ದರು. ಅದರ ಮೂಲಕವೇ ಗಣ್ಯರು, ಉದ್ಯಮಿಗಳು ಸೇರಿ ಹಲವರಿಗೆ ಫ್ರೇಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದರು. ಅದನ್ನು ಸ್ವೀಕರಿಸುತ್ತಿದ್ದ ವ್ಯಕ್ತಿಗಳ ಜೊತೆ ನಿತ್ಯವೂ ಚಾಟಿಂಗ್ ಮಾಡಲಾರಂಭಿಸುತ್ತಿದ್ದರು. ಸಲುಗೆಯಿಂದ ಮಾತನಾಡಲಾರಂಭಿಸಿದ್ದರು’ ಎಂದೂ ಮೂಲಗಳು ತಿಳಿಸಿವೆ.

‘ರಾತ್ರಿ ಹೊತ್ತಿನಲ್ಲಿ ವಿಡಿಯೊ ಕರೆ ಮಾಡುತ್ತಿದ್ದ ಆರೋಪಿಗಳು, ಸಾರ್ವಜನಿಕರನ್ನು ಪ್ರಚೋಸಿದಿ ಬೆತ್ತಲೆಗೊಳಿಸುತ್ತಿದ್ದರು. ನಂತರ, ಅದೇ ದೃಶ್ಯವನ್ನು ಚಿತ್ರೀಕರಿಸಿಟ್ಟುಕೊಳ್ಳುತ್ತಿದ್ದರು. ಮರುದಿನವೇ ವಿಡಿಯೊವನ್ನು ಸಂತ್ರಸ್ತರಿಗೆ ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಗಳು, ₹25 ಸಾವಿರದಿಂದ ಲಕ್ಷದವರೆಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದರು.’

‘ಕೇಳಿದಷ್ಟು ಹಣ ಕೊಡದಿದ್ದರೆ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ನಲ್ಲಿ ವಿಡಿಯೊ ಹರಿಬಿಡುವುದಾಗಿ ಆರೋಪಿಗಳು ಹೆದರಿಸುತ್ತಿದ್ದರು. ಮರ್ಯಾದೆಗೆ ಅಂಜಿ ಕೆಲವರು ಆರೋಪಿಗಳಿಗೆ ಕೇಳಿದಷ್ಟು ಹಣ ಕೊಟ್ಟಿದ್ದರು. ಅದರಲ್ಲಿ ಕೆಲವರು ಮಾತ್ರ ನಗರ ಹಾಗೂ ಹೊರ ನಗರಗಳ ಠಾಣೆಗಳಲ್ಲಿ ದೂರು ನೀಡಿದ್ದಾರೆ’ ಎಂದೂ ಸಿಐಡಿ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.