ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಿಕ ಸೇವಾ ನಿಯಮಕ್ಕೆ ಬದ್ಧವಾಗಿರಬೇಕು: ಸುಪ್ರೀಂ ಕೋರ್ಟ್

ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿ
Published 3 ಮೇ 2024, 20:03 IST
Last Updated 3 ಮೇ 2024, 20:03 IST
ಅಕ್ಷರ ಗಾತ್ರ

ನವದೆಹಲಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶಿಕ್ಷಕರ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯವು ಕರ್ನಾಟಕ ನಾಗರಿಕ ಸೇವಾ ನಿಯಮಗಳು– 2001ಕ್ಕೆ ಬದ್ಧವಾಗಿರಬೇಕು ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. 

ವಿಶ್ವವಿದ್ಯಾನಿಲಯಗಳಲ್ಲಿ ಶಿಕ್ಷಕರ ಹುದ್ದೆಯ ನೇಮಕಾತಿಗೆ ವಿವಿ ಕಾಯ್ದೆಯ ಸೆಕ್ಷನ್ 53 ಅಂತಿಮ ಎಂಬ ವಕೀಲರ ವಾದವನ್ನು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅರವಿಂದ್ ಕುಮಾರ್ ಅವರ ಪೀಠ ತಿರಸ್ಕರಿಸಿದೆ. 

ಬೆಂಗಳೂರು ವಿಶ್ವವಿದ್ಯಾಲಯದ ಆಂಗ್ಲ ವಿಭಾಗಕ್ಕೆ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ತಮ್ಮ ನೇಮಕಾತಿಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಚೈತ್ರಾ ನಾಗಮ್ಮನವರ್‌ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ. 

ಆದಾಗ್ಯೂ, ವಿಶ್ವವಿದ್ಯಾಲಯವು 2001ರ ನಿಯಮಗಳನ್ನು ಅನುಸರಿಸಿಲ್ಲ. ಇದು ತಪ್ಪು. ಅರ್ಜಿದಾರರು 2019ರಿಂದ ಹುದ್ದೆಯಲ್ಲಿ ಇದ್ದಾರೆ. ಹೀಗಾಗಿ, ಅರ್ಜಿದಾರರಿಗೆ ಸೂಪರ್ ನ್ಯೂಮರರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ವಿಶ್ವವಿದ್ಯಾಲಯಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT