ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಚಾಕು ಇರಿತ ಪ್ರಕರಣ; ಇಬ್ಬರ ಬಂಧನ

Last Updated 15 ಆಗಸ್ಟ್ 2022, 18:30 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರದಲ್ಲಿ ಸೋಮವಾರ ಮಧ್ಯಾಹ್ನ ಬಟ್ಟೆ ಅಂಗಡಿ ಕಾರ್ಮಿಕ ಪ್ರೇಮ್ ಸಿಂಗ್ (20) ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಇಬ್ಬರನ್ನು ರಾತ್ರಿ ಬಂಧಿಸಿದ್ದಾರೆ.

ಇಲ್ಲಿನ ಜೆ.ಸಿ.ನಗರ ಎರಡನೇ ಕ್ರಾಸ್ ನಿವಾಸಿ ನದೀಮ್ (ನೌಶಾದ್ ಅಲಿ)(25) ಹಾಗೂ ಬುದ್ಧ ನಗರ ಎರಡನೇ ಕ್ರಾಸ್ ನಿವಾಸಿ ಅಬ್ದುಲ್ ರೆಹಮಾನ್ (25) ಬಂಧಿತರು.

ನಗರದ ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮ್‌ ಸಿಂಗ್‌ (20) ಮಧ್ಯಾಹ್ನ ಅಂಗಡಿ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ನ ತರಕಾರಿ ಮಾರುಕಟ್ಟೆಯ ಹತ್ತಿರಮನೆಯ ಕಡೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು.

ಫ್ಲೆಕ್ಸ್ ವಿವಾದದ ಹಿನ್ನೆಲೆಯಲ್ಲಿ ಸೋಮವಾರ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ರಾತ್ರಿ ಕಾನೂನು, ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ, ನಗರದ ವಿವಿಧೆಡೆ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT