ಬೆಂಗಳೂರು: ‘ನೂತನ ಪಾಲಿಕೆಗಳ ಆಯುಕ್ತರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ನಗರವನ್ನು ಸ್ವಚ್ಛವಾಗಿಡಲು ಗುರಿ ನೀಡಿದ್ದೇನೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಸ ಎಲ್ಲೆಂದರಲ್ಲಿ ಹಾಕುತ್ತಿದ್ದಾರೆ. ವಾಹನಗಳಲ್ಲಿ ಬಂದು ಕಸ ಎಸೆದು ಹೋಗುತ್ತಿದ್ದಾರೆ. ರಸ್ತೆಯಲ್ಲಿ ಕಸ ಬಿಸಾಡಿ ಹೋಗುವವರನ್ನು ಗುರುತಿಸಲು ಸೂಚನೆ ನೀಡಿದ್ದೇನೆ’ ಎಂದರು.

‘ಎಲ್ಲ ಗುಂಡಿಗಳನ್ನು ಮುಚ್ಚಲು ಸೂಚನೆ ಕೊಟ್ಡಿದ್ದೇನೆ. ಯಾವಾಗ ಮುಚ್ಚುತ್ತೀರೆಂದು ಲಿಖಿತವಾಗಿ ಕೊಡಬೇಕು ಎಂದೂ ನಿರ್ದೇಶನ ನೀಡಿದ್ದೇನೆ. ಅಲ್ಲದೆ, ಆಯುಕ್ತರು ಬೆಳಿಗ್ಗೆ ಎಲ್ಲೆಲ್ಲಿ ರೌಂಡ್ಸ್ ಹೋಗುತ್ತಾರೆಂದು ಮಾಹಿತಿ ನೀಡಲು ಸೂಚಿಸಿದ್ದೇನೆ’ ಎಂದರು.

ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಶಾಸಕ ರಿಜ್ವಾನ್ ಅರ್ಷದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಪಾಲಿಕೆಗಳ ಆಯುಕ್ತರು, ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.