ಬೆಂಗಳೂರು: ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ವಿಚಾರವಾಗಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮತ್ತು ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಪರಸ್ಪರ ಕಿತ್ತಾಡಿಕೊಂಡ ಘಟನೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ನಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶಾಂಗ್ರಿ-ಲಾ ಹೋಟೆಲ್ನಲ್ಲಿ ಬುಧವಾರ ರಾತ್ರಿ ಸಭೆ ನಡೆಯಿತು.

ಕಠಾರಿಯಾ ವಿರುದ್ಧ ಕಿಡಿಕಾರಿದ ನಾರಾಯಣ ಸ್ವಾಮಿ, ‘ಕಂದಾಯ ಇಲಾಖೆಯ ಕೆಲಸಗಳು ಸರಿಯಾಗಿ ಆಗುತ್ತಿಲ್ಲ. ಕ್ಷೇತ್ರದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪತ್ರ ನೀಡಿದರೂ ಕೆಲಸಗಳನ್ನು ಮಾಡಿಕೊಡುತ್ತಿಲ್ಲ. ಅವರನ್ನು ವರ್ಗಾವಣೆ ಮಾಡುವಂತೆ ಈ ಹಿಂದೆಯೇ ನಾನೂ ಸೇರಿದಂತೆ ಹಲವು ಶಾಸಕರು ಪತ್ರ ಬರೆದಿದ್ದೇವೆ. ಆದರೂ ವರ್ಗಾವಣೆ ಮಾಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.

ನಾರಾಯಣ ಸ್ವಾಮಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ರಾಜೇಗೌಡ, ‘ಸಚಿವ ಕೃಷ್ಣ ಬೈರೇಗೌಡರಂತೆ ಕಠಾರಿಯಾ ಅವರೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಠಾರಿಯಾ ಬಗ್ಗೆ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ’ ಎಂದಿದ್ದಾರೆ. ಈ ವೇಳೆ ರಾಜೇಗೌಡ ವಿರುದ್ಧ ನಾರಾಯಣ ಸ್ವಾಮಿ ಕೆರಳಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೊನೆಗೆ ಕೋಪದಿಂದ ಸಭೆಯಿಂದ ನಾರಾಯಣಸ್ವಾಮಿ ಹೊರನಡೆದರು ಎಂದೂ ತಿಳಿದುಬಂದಿದೆ.

ಅನುದಾನಕ್ಕಾಗಿ ಬೇಡಿಕೆ: ಅನುದಾನ ಘೋಷಿಸಿದ್ದರೂ, ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ. ಸ್ಥಳೀಯ ಸಂಸ್ಥೆಯ ಚುನಾವಣೆಗಳು ಹತ್ತಿರ ಬರುತ್ತಿದ್ದು, ಅಭಿವೃದ್ಧಿ ಕಾರ್ಯ ಮಾಡದಿದ್ದರೆ ಪಕ್ಷಕ್ಕೆ ಕಷ್ಟವಾಗಲಿದೆ. ಹೀಗಾಗಿ ಮುಖ್ಯಮಂತ್ರಿ ಕಚೇರಿಯಲ್ಲಿ ಲೈಸನಿಂಗ್ ಅಧಿಕಾರಿಯನ್ನು ನೇಮಿಸುವಂತೆ ಶಾಸಕರು ಮನವಿ ಮಾಡಿದರು ಎನ್ನಲಾಗಿದೆ. ತಮಗೆ ಅನುದಾನ ನೀಡುವುದಾಗಿ ಭರವಸೆ ನೀಡಿದ್ದರೂ, ಈವರೆಗೂ ಅನುದಾನ ನೀಡಿಲ್ಲವೆಂದು ಪರಿಷತ್ ಸದಸ್ಯರು ಅಳಲು ತೋಡಿಕೊಂಡರು ಎಂದು ತಿಳಿದುಬಂದಿದೆ.

ಎಸ್ಐಆರ್ ಬಗ್ಗೆ ಹದ್ದಿನ ಕಣ್ಣಿಡಿ: ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಗ್ಗೆ ನಿಗಾ ವಹಿಸಬೇಕು. ಅನ್ಯ ರಾಜ್ಯಗಳಲ್ಲಿ ಬಿಜೆಪಿಯು ಎಸ್ಐಆರ್ನ್ನು ರಾಜಕೀಯ ಸಾಧನವಾಗಿ ಮಾಡಿಕೊಂಡಿದೆ. ಈ ಬಗ್ಗೆ ನಿಗಾವಹಿಸಿ ಮತದಾರರ ಪಟ್ಟಿಯಿಂದ ಅನಗತ್ಯವಾಗಿ ಹೆಸರು ಕೈಬಿಡದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗೆ ಶಾಸಕರು ಮನವಿ ಮಾಡಿದರು ಎಂದೂ ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.