ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ: ತನಿಖೆ

Last Updated 17 ಆಗಸ್ಟ್ 2022, 21:39 IST
ಅಕ್ಷರ ಗಾತ್ರ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನವಾದ ಭಾನುವಾರ, ಯುವಕರ ಗುಂಪೊಂದು ಕ್ಲಬ್‌ಹೌಸ್‌ನಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವುಳ್ಳ ಚಿತ್ರವಿರುವ ಡಿಪಿ ಹಾಕಿಕೊಂಡಿದ್ದ ಪ್ರಕರಣ ಹೊರಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ನಗರದ ಪೊಲೀಸ್‌ ಆಯುಕ್ತ ಪ್ರತಾಪ ರೆಡ್ಡಿ ಹೇಳಿದರು.

‘ಈ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಮಾಧ್ಯಮದ ಮೇಲೆ ತೀವ್ರ ನಿಗಾ ಇಡಲಾಗಿದೆ. ಚರ್ಚೆಗೆ ಗ್ರಾಸವಾದ ಪ್ರತಿ ವಿಷಯವೂ ಮುಖ್ಯ. ಈಶಾನ್ಯ ವಿಭಾಗದ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿರುವ ಮಾಹಿತಿ ಸಿಕ್ಕಿದೆ. ಕೆಲವರ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಾಹಿತಿ ಲಭ್ಯವಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಹೇಳಿದರು.

ಪ್ರಕರಣ ಏನು?
‘ಪಾಕಿಸ್ತಾನ ಜಿಂದಾಬಾದ್’ ಎಂಬ ಹೆಸರಿನ ಗ್ರೂಪ್‌ ರಚಿಸಿಕೊಂಡಿದ್ದ 10 ಯುವಕರು ಅಶ್ಲೀಲವಾಗಿ ಮಾತನಾಡಿ, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ನಮ್ಮದು ಪಾಕಿಸ್ತಾನವೆಂದು ಹೇಳಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂವಾದದಲ್ಲಿ ಕನ್ನಡದಲ್ಲೂ ಮಾತನಾಡಿದ್ದಾರೆ ಎನ್ನಲಾಗಿದೆ. ಕ್ಲಬ್‌ಹೌಸ್‌ ಸಂವಾದದಲ್ಲಿ ಪಾಲ್ಗೊಂಡಿದ್ದ ಒಬ್ಬರು ಸ್ಕ್ರೀನ್‌ಶಾಟ್‌ ತೆಗೆದು ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಟ್ಟಿದ್ದರಿಂದ ಪ್ರಕರಣ ಪತ್ತೆಯಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT