ಬೆಂಗಳೂರು: ಕಲಬುರ್ಗಿ, ರಾಯಚೂರು, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ವಾಸ್ತವಿಕ ಪ್ರಮಾಣ ಅರಿಯಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದೇ ಬುಧವಾರ (ಅ.21) ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಭಾನುವಾರ ಶಿವಮೊಗ್ಗಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನೆರೆ ಸಂತ್ರಸ್ತರ ಜತೆ ಇಡೀ ಸರ್ಕಾರ ಇದೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವವರನ್ನು ಸ್ಥಳಾಂತರಿಸುವ ಕೆಲಸವನ್ನು ಆಯಾ ಜಿಲ್ಲಾಡಳಿತ ಮಾಡುತ್ತಿವೆ. ಕಂದಾಯ ಸಚಿವ ಆರ್. ಅಶೋಕ ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ’ ಎಂದರು.

‘ಪ್ರವಾಹದಿಂದ ನಾಲ್ಕು ಜಿಲ್ಲೆಗಳ ನೂರಾರು ಗ್ರಾಮಗಳು ಸಂಪೂರ್ಣ ಮತ್ತು ಭಾಗಶಃ ಮುಳುಗಿವೆ. ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಆಗಿರುವ ಹಾನಿಯ ಸಂಪೂರ್ಣ ಚಿತ್ರಣ ಪಡೆಯಲು ಬುಧವಾರ ವೈಮಾನಿಕ ಸಮೀಕ್ಷೆ ನಡೆಸುತ್ತೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.