ಬೆಂಗಳೂರು: ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಮುಚ್ಚಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ನ ಬಿ.ಕೆ. ಸಂಗಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ವಿಐಎಸ್‌ಎಲ್ ರಾಜ್ಯದ ಪ್ರತಿಷ್ಠಿತ ಮತ್ತು ದಕ್ಷಿಣ ಭಾರತದ ಮೊದಲ ಉಕ್ಕು ಕಾರ್ಖಾನೆ. ಇದನ್ನು ಉಳಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

‘ಭಾರತೀಯ ಉಕ್ಕು ಪ್ರಾಧಿಕಾರ ತಮ್ಮಿಂದ ಇದನ್ನು ನಡೆಸಲು ಸಾಧ್ಯವಿಲ್ಲ ಎಂದು ಬಹಳ ಹಿಂದೆಯೇ ಹೇಳಿ ಬಿಟ್ಟಿದೆ. ಹೀಗಾಗಿ ಖಾಸಗಿಯವರು ತೆಗೆದುಕೊಳ್ಳಲು ಮುಂದೆ ಬಂದರೆ ಅವಕಾಶ ನೀಡುತ್ತೇವೆ. ಕೆಲವು ಉದ್ಯಮಿಗಳ ಜತೆ ಈ ಸಂಬಂಧ ಮಾತನಾಡಿದ್ದೇನೆ. ಕೆಲವರು ಪರಿಶೀಲಿಸುವುದಾಗಿ ಹೇಳಿದ್ದಾರೆ. ಇದು ಒಮ್ಮೆ ಆರಂಭವಾದರೆ ರಾಜ್ಯ ಮತ್ತು ಕೇಂದ್ರಕ್ಕೆ ತೆರಿಗೆ ಬರುತ್ತದೆ. ನೌಕರರ ಕೆಲಸವೂ ಉಳಿಯುತ್ತದೆ’ ಎಂದು ಬೊಮ್ಮಾಯಿ ಹೇಳಿದರು.

ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರದ ಸಚಿವರ ಬಳಿಯೂ ಈಗಾಗಲೇ ಈ ಕುರಿತು ಮಾತನಾಡಿದ್ದೇನೆ. ಮುಂದೆಯೂ ಮಾತನಾಡುತ್ತೇನೆ ಎಂದರು.

ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಈ ಕಾರ್ಖಾನೆಗೆ ಇತಿಹಾಸವಿದೆ. ಇದನ್ನು ಉಳಿಸಿಕೊಳ್ಳಬೇಕು. ಇದನ್ನು ಲಾಭದಾಯಕವಾಗಿ ನಡೆಸಲು ಸಾಧ್ಯವಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡೋಣ ಎಂದು ತಿಳಿಸಿದರು.

ಓದಿ... ಭದ್ರಾವತಿ ಉಕ್ಕಿನ ಕಾರ್ಖಾನೆ ಬಂದ್: BJP ಕೊಟ್ಟ ದ್ರೋಹದ ಗಿಫ್ಟ್ ಎಂದ ಕಾಂಗ್ರೆಸ್, ಜೆಡಿಎಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.