ಹೊಸದುರ್ಗ: ‘ಅಂತರರಾಜ್ಯ ಜಲ ವಿವಾದ ಕಾಯ್ದೆ ಅಪ್ರಸ್ತುತವಾಗಿದೆ. ಇದು ಸಮಸ್ಯೆ ಇತ್ಯರ್ಥಪಡಿಸುವ ಬದಲು ಹಲವು ಪ್ರಕರಣಗಳಿಗೆ ಕಾರಣವಾಗಿದೆ. ನ್ಯಾಯಾಧೀಕರಣ ರಚನೆ ಮಾಡಿ ಜಲವಿವಾದವನ್ನು ಇನ್ನಷ್ಟು ಕಗ್ಗಂಟು ಮಾಡಲಾಗುತ್ತಿದೆ’ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ನ್ಯಾಯಾಂಗ ಇಲಾಖೆ ಹಾಗೂ ವಕೀಲರ ಸಂಘದಿಂದ ಶನಿವಾರ ಏರ್ಪಡಿಸಿದ್ದ ಹೊಸದುರ್ಗ ನ್ಯಾಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕಾಲ ಬದಲಾದಂತೆ ಹಲವು ಕಾನೂನುಗಳು ಅಪ್ರಸ್ತುತವಾಗಿವೆ. ಇಂತಹ ಕಾನೂನುಗಳನ್ನು ಗುರುತಿಸಿ ಬದಲಾವಣೆ ತರುವ ಅಗತ್ಯವಿದೆ. ಕ್ಲಿಷ್ಟಕರ ವ್ಯವಸ್ಥೆಯ ನಡುವೆ ನ್ಯಾಯಾಂಗದ ಮೇಲೆ ಜನರಿಗೆ ನಂಬಿಕೆ ಇದೆ. ಈ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಕಾನೂನುಗಳಲ್ಲಿ ಬದಲಾವಣೆ ಆಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.