ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಕನ್ನಡ ಹಾಡುಗಳು ಮತ್ತು ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.
— Narendra Modi (@narendramodi) August 12, 2022
"ಕನ್ನಡ ಭಾವಗೀತೆಗಳಿಗೆ ಜೀವತುಂಬಿದ, ಕನ್ನಡದ ಮೊದಲ ರಜತ ಕಮಲ ಪ್ರಶಸ್ತಿಗೆ ಭಾಜನರಾದ ಅಪ್ರತಿಮ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಗಲಿಕೆ ಕನ್ನಡ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ" : ಮುಖ್ಯಮಂತ್ರಿ @BSBommai pic.twitter.com/W8tm8hAu9E
— CM of Karnataka (@CMofKarnataka) August 12, 2022
ಖ್ಯಾತ ಸುಗಮ ಸಂಗೀತ ಗಾಯಕ ಶ್ರೀ ಶಿವಮೊಗ್ಗ ಸುಬ್ಬಣ್ಣ ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರಿಗೆ ಸದ್ಗತಿಯನ್ನು ಕರುಣಿಸಲಿ, ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S.Yediyurappa (@BSYBJP) August 12, 2022
ಕನ್ನಡದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ಸಂಗೀತ ಲೋಕ ಮತ್ತು ಕನ್ನಡಿಗರಾದ ನಾವೆಲ್ಲರೂ ಸಿರಿಕಂಠವೊಂದನ್ನು ಕಳೆದುಕೊಂಡಿದ್ದೇವೆ.
— Siddaramaiah (@siddaramaiah) August 12, 2022
ಸುಬ್ಬಣ್ಣ ಅವರು ಹಾಡುಗಳ ಮೂಲಕ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ.
ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖ ದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/uAPaWNm1n6
ಸುಗಮ ಸಂಗೀತ ಲೋಕದ ಅನನ್ಯ ಪ್ರತಿಭೆ, ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.
— H D Kumaraswamy (@hd_kumaraswamy) August 12, 2022
ಕುವೆಂಪು, ಬೇಂದ್ರೆ ಸೇರಿ ಹೆಸರಾಂತ ಕವಿಗಳ ಗೀತೆಗಳಿಗೆ ಸ್ವರ ಕಟ್ಟಿದ ಸುಬ್ಬಣ್ಣ ಅವರ ಅಗಲಿಕೆ ನಾಡಿಗೆ ಬಹದೊಡ್ಡ ನಷ್ಟ. 1/2 pic.twitter.com/H8LoVyv5Dr
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.