ಬೆಂಗಳೂರು: ಪಕ್ಷದ ಕೆಲವು ಶಾಸಕರೊಂದಿಗೆ ಚರ್ಚಿಸಲು ಯಾವುದೇತುರ್ತು ಸಭೆ ಕರೆದಿಲ್ಲ ಎಂದುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪಕ್ಷದ ಕೆಲವು ಶಾಸಕರೊಂದಿಗೆ ಚರ್ಚಿಸಲು ನಾನು ತುರ್ತು ಸಭೆ ಕರೆದಿದ್ದೇನೆ ಎನ್ನುವ ಸುದ್ದಿ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದನ್ನು ಗಮನಿಸಿದ್ದೇನೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಅಂತಹ ಯಾವುದೇ ಸಭೆಯನ್ನು ನಾನು ಕರೆದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ... ನಾಡಿನ ಸಂಕಷ್ಟದ ಮಧ್ಯೆ ಬಿಜೆಪಿ ಅತೃಪ್ತರ ಭೋಜನ ಕೂಟ

ಇತ್ತ ಬಿಜೆಪಿಯ ಹಿರಿಯ ಶಾಸಕ ಉಮೇಶ್ ಕತ್ತಿ ಗುರುವಾರ ರಾತ್ರಿ ಪಕ್ಷದ ಆಪ್ತ ಶಾಸಕರೊಂದಿಗೆ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು ಹೊರವಲಯದ ಯಲಹಂಕ ಬಳಿ ರೆಸಾರ್ಟ್‌ವೊಂದರಲ್ಲಿ ನಡೆದ ಭೋಜನ ಕೂಟದಲ್ಲಿ 20 ಕ್ಕೂ ಹೆಚ್ಚು ಶಾಸಕರು ಭಾಗವಹಿಸಿದ್ದು, ಕೆಲವು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.