ಬೆಂಗಳೂರು: 'ಅಗತ್ಯ ಇರುವ ಕೋವಿಡ್ ರೋಗಿಗಳಿಗೆ ಮಾತ್ರ ರೆಮ್‌ಡಿಸಿವಿರ್ ಚುಚ್ಚುಮದ್ದು ಮತ್ತು ಆಕ್ಸಿಜನ್ ಬೆಡ್ಒದಗಿಸುವ ಮೂಲಕ ಕೃತಕ ಅಭಾವ ಸೃಷ್ಟಿ ಆಗದಂತೆ ಎಚ್ಚರಿಕೆ ವಹಿಸಬೇಕು' ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಗುರುವಾರ ಅವರು ವಿಡಿಯೊ ಸಂವಾದ ನಡೆಸಿದರು.

'ಪ್ರತಿ ಆಸ್ಪತ್ರೆಯಲ್ಲಿ ರೆಮ್‌ಡಿಸಿವಿರ್ ಔಷಧ ಮತ್ತು ಆಕ್ಸಿಜನ್ ಬಗ್ಗೆ ಆಡಿಟ್ ಆಗಬೇಕು. ಯಾರಿಗೆ ಅವಶ್ಯವಿದೆಯೋ ಅವರಿಗೆ ಕೊಡುವ ವ್ಯವಸ್ಥೆ ಮಾಡಬೇಕು. ವೆಂಟಿಲೇಟರ್ ಬೆಡ್‌ಗಳನ್ನು ಕೂಡಾ ಅತ್ಯಂತ ವಿವೇಚನೆಯಿಂದ ಬಳಸಬೇಕು. ಎಲ್ಲ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸರಿಯಾದ ಸಮಯದಲ್ಲಿ ತಲುಪುವಂತೆ ಮಾಡಬೇಕು. ಕೊರತೆಯಾದರೆ, ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲೆಯಿಂದ ಪಡೆದುಕೊಳ್ಳುವಂತೆ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು' ಎಂದು ಜಿಲ್ಲಾಧಿಕಾರಿಗಳಿಗೆ ಅವರು ಸಲಹೆ ನೀಡಿದರು.

'ಕೋವಿಡ್ ಸೋಂಕು ತಡೆಗಟ್ಟುವ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಪರೀಕ್ಷೆಗಳನ್ನು ಕೇವಲ ರೋಗಲಕ್ಷಣ ಇದ್ದವರಿಗೆ ಸೀಮಿತ ಮಾಡಿ, ಪರೀಕ್ಷಾ ಫಲಿತಾಂಶ 24 ಗಂಟೆಗಳಲ್ಲಿ ಕೊಡುವ ವ್ಯವಸ್ಥೆ ಮಾಡಬೇಕು.ಬಾಕಿ ಇರುವ ಪರೀಕ್ಷೆಗಳನ್ನು ಕೂಡಲೇ ಪೂರ್ಣಗೊಳಿಸಬೇಕು' ಎಂದು ಸೂಚನೆ ನೀಡಿದರು.

'ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು.ಜನರು ಮಾಸ್ಕ್ ಧರಿಸಿರುವುದು, ಅಂತರ ಕಾಯ್ದುಕೊಳ್ಳುವುದನ್ನು ಜಿಲ್ಲಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು' ಎಂದರು.

'ಕೆಲವು ಜಿಲ್ಲೆಗಳಲ್ಲಿ ಇನ್ನೂ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆದಿಲ್ಲ, ಅಂಥ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆದ್ಯತೆಯ ಮೇರೆಗೆ ತೆರೆಯುಬೇಕು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗು ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಬೇಕು ಇದಕ್ಕಾಗಿ ವಸತಿ ಶಾಲೆಗಳು, ಹಾಸ್ಟೆಲ್‌ಗಳನ್ನು ಬಳಸಿಕೊಳ್ಳಬಹುದು. ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ರೋಗಿಗಳಿಗೆ ಹಳ್ಳಿಗಳಲ್ಲಿ ಸರಿಯಾದ ಕಾಳಜಿ ವಹಿಸಬೇಕು' ಎಂದೂ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

'ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಆಗಿದ್ದು, ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಮೆಡಿಕಲ್ ಕಿಟ್ವಿತರಿಸಲು ಮತ್ತು ಅವರ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನ್ನು ರಚಿಸುವಂತೆಯೂ ಸೂಚಿಸಿದರು.

ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಹಾಗೂ ಇತರೆ ಸಂಪನ್ಮೂಲಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು.

ಮೈಸೂರಿನಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್‌ನಲ್ಲಿ ಇರುವ ಒಟ್ಟು 5 ಆಕ್ಸಿಜನ್ ಜನರೇಟಿಂಗ್ ಘಟಕಗಳ ಪೈಕಿ ಎರಡು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಮೂರು ಘಟಕಗಳ ದುರಸ್ತಿಗೆ ಕ್ರಮ ವಹಿಸುವಂತೆ ಅಲ್ಲಿನ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸೂಚಿಸಿದರು.

ಕೃಷಿ ಚಟುವಟಿಕೆ, ಸರ್ಕಾರ ಅನುಮತಿ ನೀಡಿರುವ ಕೈಗಾರಿಕೆ ಮತ್ತಿತರ ಚಟುವಟಿಕೆಗಳು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಬಾಧಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದೂ ಅವರು ನಿರ್ದೇಶನ ನೀಡಿದರು.

ಕೋವಿಡ್ ವಿಚಾರದಲ್ಲಿ ಮೋದಿ ಸರ್ಕಾರಕ್ಕೆ ಅನುಕಂಪವಿಲ್ಲ: ನಟಿ ರಮ್ಯಾ

'ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಇದೇ ವೇಳೆ ಮುಖ್ಯಮಂತ್ರಿ ಸಲಹೆ ನೀಡಿದರು.

2 ಕೆಜಿ ಅಕ್ಕಿ ಬೇಡ, 10 ಕೆಜಿ ಅಕ್ಕಿ ಕೊಡಿ: ಕಾಂಗ್ರೆಸ್ ಪತ್ರ ಚಳವಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.