ಬೆಂಗಳೂರು: ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಪರಿಶೀಲಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಿ.ಎಂ ಕಚೇರಿ, ‘ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿಯವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ’ ಎಂದು ತಿಳಿಸಿದೆ.

ಜಿಲ್ಲೆಯಲ್ಲೇ ಮೊಕ್ಕಾಂಗೆ ಸೂಚನೆ: ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಾಗೂ ಹೆಚ್ಚು ಮಳೆ ಬೀಳುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿಯವರು ಶನಿವಾರ ಬೆಳಿಗ್ಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ. ಸದ್ಯದ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.