ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರ ಭೇಟಿಗೆ ಇದೇ 25ರಂದು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ವಿಧಾನ ಪರಿಷತ್ನ ನಾಲ್ಕು ಖಾಲಿ ಸ್ಥಾನಗಳಿಗೆ ನಾಮನಿರ್ದೇಶನ ಪಟ್ಟಿ ಅಂತಿಮಗೊಳಿಸುವುದು, ನಿಗಮ– ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಸೇರಿದಂತೆ ಹಲವು ವಿಚಾರಗಳ ಕುರಿತು ಪಕ್ಷದ ವರಿಷ್ಠರ ಜೊತೆ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇದೇ 23ರಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ‘25ರಂದು ನಾನು ಹಾಗೂ ಮುಖ್ಯಮಂತ್ರಿ ದೆಹಲಿ ಪ್ರವಾಸ ಮಾಡುತ್ತಿದ್ದೇವೆ. ಅಲ್ಲಿ ಸಂಸತ್ ಅಧಿವೇಶನ ನಡೆಯುತ್ತಿದೆ. ನನಗೆ ಗೊತ್ತಿರುವ ಮಾಹಿತಿ ಇಷ್ಟೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.