ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಯಾತ್ರೆ ಉದ್ಘಾಟನೆಯಲ್ಲಿ ಸಿ.ಎಂ, ಡಿಸಿಎಂ

Published 13 ಜನವರಿ 2024, 15:53 IST
Last Updated 13 ಜನವರಿ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ಮಣಿಪುರದಿಂದ ಭಾನುವಾರ ಆರಂಭಿಸಲಿರುವ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ  ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪಾಲ್ಗೊಳ್ಳಲಿದ್ದಾರೆ.

ಸಿದ್ದರಾಮಯ್ಯ ಮತ್ತು ಶಿವಕುಮಾರ್‌ ಭಾನುವಾರ ಬೆಳಿಗ್ಗೆ ನಗರದ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಪ್ರತ್ಯೇಕ ವಿಶೇಷ ವಿಮಾನಗಳಲ್ಲಿ ಮಣಿಪುರದ ರಾಜಧಾನಿ ಇಂಫಾಲ್‌ಗೆ ತೆರಳುವರು. ಅಲ್ಲಿಂದ ಪಾದಯಾತ್ರೆ ಆರಂಭವಾಗಲಿರುವ ಥೌಬಾಲ್‌ಗೆ ತೆರಳಿ, ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಪ್ರತ್ಯೇಕವಾಗಿಯೇ ನಗರಕ್ಕೆ ಹಿಂದಿರುಗುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT