ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡಿಸೇಲ್ ದರ ₹2 ಇಳಿಕೆ: ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಭಾಗಿ
Last Updated 17 ಸೆಪ್ಟೆಂಬರ್ 2018, 5:29 IST
ಅಕ್ಷರ ಗಾತ್ರ

ಕಲಬುರ್ಗಿ: ಪೆಟ್ರೋಲ್ ಮತ್ತು ಡಿಸೇಲ್ ದರವನ್ನು ರಾಜ್ಯಸರ್ಕಾರದ ವತಿಯಿಂದಪ್ರತಿ ಲೀಟರ್‌ಗೆ ₹2 ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಬೆಳಿಗ್ಗೆ ಇಲ್ಲಿ ಘೋಷಿಸಿದರು.

ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿರುವ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜನ ಸಾಮಾನ್ಯರ ಬವಣೆಯನ್ನು ಅರಿತುಕೊಂಡು ಬೆಲೆ ಇಳಿಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಶಾಸಕರಾದ ಎಂ.ವೈ.ಪಾಟೀಲ, ಡಾ. ಅಜಯಸಿಂಗ್, ಕನ್ನೀಜ್ ಫಾತಿಮಾ, ಡಾ.ಉಮೇಶ ಜಾಧವ, ಬಿ.ಜಿ.ಪಾಟೀಲ, ಬಸವರಾಜ ಮತ್ತಿಮೂಡ, ದತ್ತಾತ್ರೇಯ ಪಾಟೀಲ ರೇವೂರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಭಾರತಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ದೊರಕಿದರೆ, ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ನಿಜಾಮರ ಆಡಳಿತವಿತ್ತು. 1948ರ ಸೆಪ್ಟೆಂಬರ್ 17ರಂದು ನಿಜಾಮರ ಆಡಳಿತ ಕೊನೆಗೊಂಡಿತು. ಅಂದಿನಿಂದ ಸೆಪ್ಟೆಂಬರ್‌ 17ರಂದು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನವನ್ನು ಆಚರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT