ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಂಗೆಗೆ ಕರೆ ಕೊಡುತ್ತೇವೆ’; ಬಿಜೆಪಿಗೆ ಸಿಎಂ ಕುಮಾರಸ್ವಾಮಿ ಎಚ್ಚರಿಕೆ

Last Updated 20 ಸೆಪ್ಟೆಂಬರ್ 2018, 19:25 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮ್ಮಿಶ್ರ ಸರ್ಕಾರಕ್ಕೆ ಇದೇ ರೀತಿ‌ ತೊಂದರೆ ನೀಡಿದರೆ ನಾನು ಸುಮ್ಮನಿರುವುದಿಲ್ಲ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ನಾಡಿನ ಜನರಿಗೆ ಕರೆ ಕೊಡುತ್ತೇವೆ’ ಎಂದು ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವಿಷಯದಲ್ಲಿ ಬಿಜೆಪಿಯವರು ಹುಡುಗಾಟ ಆಡುವುದನ್ನು ನಿಲ್ಲಿಸಬೇಕು. ಅವರೊಬ್ಬರೇ ಅಧಿಕಾರದಲ್ಲಿ ಇರಬೇಕಾ’ ಎಂದು ಕಿಡಿಕಾರಿದರು.

ಇದಕ್ಕೆ ಬೆಂಗಳೂರಿನಲ್ಲಿ ತಿರುಗೇಟು ಕೊಟ್ಟಿರುವ ಬಿಜೆಪಿ ನಾಯಕರು, ಜನ ದಂಗೆ ಏಳಬೇಕು ಎಂದು ಕರೆ ನೀಡಿರುವ ಮುಖ್ಯಮಂತ್ರಿ ವಿರುದ್ಧ ಪೊಲೀಸರು ಮೊಕದ್ದಮೆ ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

‘ಈ ವಿಚಾರದಲ್ಲಿ ರಾಜ್ಯಪಾಲರು ತಕ್ಷಣವೇ ಮಧ್ಯಪ್ರವೇಶ ಮಾಡಿ ಕುಮಾರಸ್ವಾಮಿಗೆ ಎಚ್ಚರಿಕೆ ನೀಡಬೇಕು. ಅಲ್ಲದೆ, ರಾಜ್ಯಪಾಲರಿಗೆ ದೂರು ನೀಡಲು ಚಿಂತನೆ ನಡೆಸಲಾಗಿದೆ’ ಎಂದು ವಿಧಾನಸಭೆ ವಿರೋಧಪಕ್ಷದ ಉಪನಾಯಕ ಗೋವಿಂದ ಕಾರಜೋಳ ತಿಳಿಸಿದರು.

ದಂಗೆ ಮತ್ತು ರಕ್ತ ಕಾಂತ್ರಿಗೆ ಕರೆ ನೀಡುವವರು ನಕ್ಸಲರೇ ಹೊರತು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಕುಮಾರಸ್ವಾಮಿ ಹೇಳಿಕೆ ದೇಶದ್ರೋಹದ್ದಾಗಿದೆ ಎಂದು ಶಾಸಕ ಆರ್‌.ಅಶೋಕ್‌ ತಿಳಿಸಿದರು.

‘ದಂಗೆ ಏಳಿ’ ಹೇಳಿಕೆಯನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶುಕ್ರವಾರ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT