ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ -ಜೆಡಿಎಸ್ ಮೈತ್ರಿ: ನಾಳೆ ಸಿ.ಎಂ.ಇಬ್ರಾಹಿಂ ಸಭೆ

Published 25 ಅಕ್ಟೋಬರ್ 2023, 13:55 IST
Last Updated 25 ಅಕ್ಟೋಬರ್ 2023, 13:55 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗಿನ ಜೆಡಿಎಸ್ ಮೈತ್ರಿಯನ್ನು ವಿರೋಧಿಸಿ ಪಕ್ಷದ ಎಲ್ಲ ರಾಜ್ಯ ಘಟಕಗಳ ಮುಖಂಡರ ಜತೆಗೆ ನವದೆಹಲಿಯಲ್ಲಿ ಗುರುವಾರ ಸಭೆ ಆಯೋಜಿಸಲಾಗಿದೆ ಎಂದು ಜೆಡಿಎಸ್ ಮುಖಂಡ ಸಿ.ಎಂ. ಇಬ್ರಾಹಿಂ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಈ ಅಪವಿತ್ರ ಮೈತ್ರಿಗೆ ಎಲ್ಲ ರಾಜ್ಯ ಘಟಕಗಳ ವಿರೋಧ‌ ಇದೆ. ಮೈತ್ರಿಯನ್ನು ಮರು ಪರಿಶೀಲಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಮನವರಿಕೆ ಮಾಡಲಾಗುವುದು. ಒಂದು ವೇಳೆ ನಿಲುವು ಬದಲಿಸದಿದ್ದರೆ ಹೊಸ ಅಧ್ಯಕ್ಷರನ್ನು ನೇಮಿಸಲಾಗುವುದು’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT