ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ: ಸಿ.ಎಂ.ಇಬ್ರಾಹಿಂ

Published 19 ಅಕ್ಟೋಬರ್ 2023, 10:34 IST
Last Updated 19 ಅಕ್ಟೋಬರ್ 2023, 10:34 IST
ಅಕ್ಷರ ಗಾತ್ರ

ಬೆಂಗಳೂರು: ‘ಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲ. ಅವರ ನಿರ್ಧಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ’ ಎಂದು ಸಿ.ಎಂ.ಇಬ್ರಾಹಿಂ ಹೇಳಿದರು.

ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

‘ನನ್ನ ಪುತ್ರನನ್ನು ಕಳೆದುಕೊಂಡು ಹುಬ್ಬಳ್ಳಿ ಈದ್ಗಾ ಸಮಸ್ಯೆ ಬಗೆಹರಿಸಿದ್ದೆ. ಜೆಡಿಎಸ್‌ ಸರ್ಕಾರ ಗಟ್ಟಿ ಮಾಡಿದ್ದೆ. ಈಗ ತಮ್ಮ ಪುತ್ರನ ಸಲುವಾಗಿ ಅನ್ಯರ ಮಕ್ಕಳನ್ನು ದೇವೇಗೌಡರು ಬಲಿ ಕೊಡುತ್ತಿದ್ದಾರೆ. ಮಹಾಭಾರತದಲ್ಲಿ ಧೃತರಾಷ್ಟ್ರನಿಗಾದ ಸ್ಥಿತಿಯೇ ದೇವೇಗೌಡರಿಗೂ ಬರಲಿದೆ’ ಎಂದರು. 

‘ಪಕ್ಷದ ಕಾರ್ಯಕಾರಿ ಸಮಿತಿ ವಿಸರ್ಜಿಸಿದ ನಂತರ ಕುಮಾರಸ್ವಾಮಿಗೇ ಏಕೆ ಪಟ್ಟ ನೀಡಿದರು. ಜಿ.ಟಿ.ದೇವೇಗೌಡಗೆ ನೀಡಬಹುದಿತ್ತಲ್ಲ. ನಾನು ನಾಲ್ಕು ವರ್ಷಗಳ ಅವಧಿ ಇದ್ದ ವಿಧಾನ ಪರಿಷತ್ ಸ್ಥಾನ ತೊರೆದು ಪಕ್ಷಕ್ಕೆ ಬಂದೆ. ಇನ್ನೂ ಎಷ್ಟು ಮನೆ ಹಾಳು ಮಾಡಿದ್ದೀರಿ. 90 ವರ್ಷವಾಗಿದೆ. ಇನ್ನಾದರೂ ನಿಲ್ಲಿಸಿ. ನನ್ನನ್ನು ಕೆಣಕಿದರೆ ನೆಟ್ಟಗಿರುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT