ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಿಣಿಯರ ಖಾತೆಗೆ ಹಣ

Last Updated 21 ಸೆಪ್ಟೆಂಬರ್ 2018, 17:43 IST
ಅಕ್ಷರ ಗಾತ್ರ

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಗರ್ಭಿಣಿಯರ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ವರ್ಗಾಯಿಸುವ ‘ಮುಖ್ಯಮಂತ್ರಿ ಮಾತೃಶ್ರೀ ಯೋಜನೆ’ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಗರ್ಭಿಣಿಯರಿಗೆ ತಿಂಗಳಿಗೆ ₹6 ಸಾವಿರ ಭತ್ಯೆ ನೀಡಲಾಗುತ್ತದೆ ಎಂದು ಜೆಡಿಎಸ್‌ ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಈ ಯೋಜನೆಯಡಿ ಗರ್ಭಿಣಿಯರಿಗೆ ಹೆರಿಗೆ ಪೂರ್ವದ ಮೂರು ತಿಂಗಳು ಹಾಗೂ ಬಾಣಂತಿಯರಿಗೆ ಹೆರಿಗೆ ನಂತರದ ಮೂರು ತಿಂಗಳು ತಿಂಗಳಿಗೆ ₹1 ಸಾವಿರ ನೀಡಲಾಗುತ್ತದೆ.

ಈ ಮೊತ್ತವನ್ನು ಐದು ವರ್ಷಗಳಲ್ಲಿ ಹಂತ ಹಂತವಾಗಿ ಹೆಚ್ಚಿಸಲಾಗುತ್ತದೆ. ಈ ಯೋಜನೆಯು ತಾಯಿಯ ಮೊದಲ ಎರಡು ಮಕ್ಕಳಿಗೆ ಅನ್ವಯವಾಗುತ್ತದೆ. ಇದಕ್ಕೆ ₹350 ಕೋಟಿ ಮೀಸಲಿಡಲಾಗಿದೆ. ನವೆಂಬರ್‌ನಿಂದ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಜೆಟ್‌ನಲ್ಲಿ ಪ್ರಕಟಿಸಿದ್ದರು. ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಇದಕ್ಕೆ ಅಂಕಿತ ಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT