ಬೆಂಗಳೂರು:‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಯುವಕರು ಆರಂಭಿಸಿರುವ ‘ಆನ್ಲೈನ್ ಅಭಿಯಾನ’ಕ್ಕೆ ಪ್ರತಿಕ್ರಿಯೆಯಾಗಿ ಮುಖ್ಯಮಂತ್ರಿ ಕಚೇರಿ ಈ ಟ್ವೀಟ್ ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿ, ಮಲೆನಾಡಿನ ಗಡಿಭಾಗದಲ್ಲಿಅಪಘಾತವಾದರೆ ಅಥವಾಇನ್ಯಾವುದೇ ರೀತಿಯಲ್ಲಿ ಜೀವಕ್ಕೆ ಹಾನಿಯಾಗುವ ಪರಿಸ್ಥಿತಿಯುಂಟಾದರೆ ಸೂಕ್ತ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆಯಿಲ್ಲ. ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು ಮಂಗಳೂರು, ಮಣಿಪಾಲ ಅಥವಾ ಗೋವಾಕ್ಕೆ ಹೋಗಬೇಕಾಗಿದೆ. ಇದರಿಂದ ಆಕ್ರೋಶಗೊಂಡಿರುವ ಯುವಕರು ಅಭಿಯಾನ ಆರಂಭಿಸಿದ್ದಾರೆ.

#WeNeedEmergencyHospitalInUK ಎಂಬ ಹ್ಯಾಷ್ ಟ್ಯಾಗ್ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಬೇಡಿಕೆ ಮಂಡಿಸಲಾಗುತ್ತಿದೆ. ತಮ್ಮ ಬರಹಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಸದ ಅನಂತಕುಮಾರ ಹೆಗಡೆ, ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಮ, ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಯುವಕರು ‘ಟ್ಯಾಗ್’ ಮಾಡುತ್ತಿದ್ದಾರೆ.

ಇದನ್ನೂ ಓದಿ:ಉತ್ತರ ಕನ್ನಡ: ಹೈಟೆಕ್ ಆಸ್ಪತ್ರೆಗೆ ಆನ್ಲೈನ್ ಅಭಿಯಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.