ಬೆಂಗಳೂರು: ನಿಗದಿತ ವೇಳಾಪಟ್ಟಿಯಡಿ ಯುಪಿಎಸ್‌ಸಿ ನೇಮಕಾತಿ ನಡೆಸುವ ಮಾದರಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರದ ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ನೇಮಕಾತಿ ಪ್ರಕ್ರಿಯೆಗಳ ವಿಳಂಬ, ಕಾನೂನು ತೊಡಕುಗಳು ಮತ್ತು 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಪ್ರತಿ ವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುಕೂಲವಾಗುವಂತೆ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವಗಳನ್ನು ಸಲ್ಲಿಸಬೇಕು ಮತ್ತು ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕವನ್ನೂ ನಿಗದಿಪಡಿಸಬೇಕು ಎಂದರು.

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆ ಕುರಿತು ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸಿದ್ದರಾಮಯ್ಯ ಸೂಚಿಸಿದರು.

ಸಚಿವ ಸಂಪುಟದ ಉಪಸಮಿತಿಯ ಸೂಚನೆಗಳನ್ನು ಇಲಾಖೆ ಮುಖ್ಯಸ್ಥರು ಪಾಲಿಸಬೇಕು. ತಪ್ಪಿದಲ್ಲಿ ಕ್ರಮಕೈಗೊಳ್ಳಲಾಗುವುದು. ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕೆಂದು ಅವರು ಹೇಳಿದರು.

ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವುದು ತಡವಾಗುವುದರಿಂದ ನೇಮಕಾತಿ ಆದೇಶ ನೀಡುವುದೂ ತಡವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಬೇಕು ಎಂದು ಸೂಚಿಸಿದರು.

ಮುಂದಿನ ವಾರ ಮತ್ತೊಮ್ಮೆ ಸಭೆ ಕರೆದು ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ಮುಖ್ಯಮಂತ್ರಿ ಹೇಳಿ ದರು. ಸಚಿವರಾದ ಜಿ.ಪರಮೇಶ್ವರ, ಎಚ್.ಕೆ.ಪಾಟೀಲ, ಈಶ್ವರ ಖಂಡ್ರೆ,
ಡಿ. ಸುಧಾಕರ್, ಡಾ.ಎಂ.ಸಿ.ಸುಧಾಕರ್, ಎನ್.ಎಸ್. ಬೋಸರಾಜು, ರಹೀಂ ಖಾನ್ ಸಭೆಯಲ್ಲಿ ಭಾಗವಹಿಸಿದ್ದರು.

ಕೆಇಎ ಪರೀಕ್ಷಾ ಶುಲ್ಕ ದುಬಾರಿ: ಪ್ರಿಯಾಂಕ್ ಖರ್ಗೆ

ವಿವಿಧ ನೇಮಕಾತಿ ಪ್ರಾಧಿಕಾರಗಳು ಇಡೀ ನೇಮಕಾತಿ ಪ್ರಕ್ರಿಯೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಭೆಯಲ್ಲಿ ಒತ್ತಾಯಿಸಿದರು.

ಎಲ್ಲಾ ಗ್ರೂಪ್ ‘ಸಿ’ ಪರೀಕ್ಷೆಗಳು ಒಂದೇ ಪಠ್ಯಕ್ರಮವನ್ನು ಹೊಂದಿರುವುದರಿಂದ ಎಲ್ಲಾ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಾಧಿಕಾರಗಳು ಒಂದೇ ಪರೀಕ್ಷೆ ನಡೆಸಬೇಕು. ಒಎಂಆರ್ ಆಧಾರಿತ ಲಿಖಿತ ಪರೀಕ್ಷೆಯ ಬದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಪರಿಚಯಿಸಬೇಕು ಎಂದು ಹೇಳಿದರು. ಇತರ ನೇಮಕಾತಿ ಏಜೆನ್ಸಿಗಳಿಗೆ ಹೋಲಿಸಿದರೆ ಕೆಇಎ ನಡೆಸುವ ಎಲ್ಲಾ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕಗಳು ದುಬಾರಿ ಆಗಿವೆ. ಇದರಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.