ಬೆಂಗಳೂರು/ ಬಾಗಲಕೋಟೆ: ‘ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾರ ತೀರ್ಮಾನ ನಿರ್ಣಾಯಕ’ ಎಂಬ ವಿಷಯದ ಕುರಿತು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿಭಿನ್ನ ಹೇಳಿಕೆ ನೀಡಿದ್ದಾರೆ.

‘ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಜೊತೆ ಶಾಸಕರ ನಿರ್ಧಾರವೂ ಮುಖ್ಯವಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬಾಗಲಕೋಟೆಯಲ್ಲಿ ಪ್ರತಿಪಾದಿಸಿದ್ದಾರೆ. ಆದರೆ, ‘ಮುಖ್ಯಮಂತ್ರಿಯಾಗಲು ಶಾಸಕರ ಬಲ ಮುಖ್ಯವಲ್ಲ. ಎಲ್ಲ ನಿರ್ಧಾರಗಳನ್ನು ಹೈಕಮಾಂಡ್ ಮಾಡುತ್ತದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಸುವರ್ಣ’ ಸುದ್ದಿವಾಹಿನಿಗೆ ಇತ್ತೀಚೆಗೆ ಸಂದರ್ಶನ ನೀಡಿದ್ದ ಶಿವಕುಮಾರ್, ‘ಶಾಸಕರ ಬಲಾಬಲದ ಮೇಲೆ ಮುಖ್ಯಮಂತ್ರಿ ಸ್ಥಾನ ನಿರ್ಧಾರ ಆಗುವುದಿಲ್ಲ. ಹೈಕಮಾಂಡ್ ಮಾತೇ ಅಂತಿಮ. ವರಿಷ್ಠರು ಹೇಳಿದ್ದನ್ನು ಕೇಳಬೇಕು. ಹೈಕಮಾಂಡ್ನವರು ಏನು ಕೆಲಸ ಕೊಡುತ್ತಾರೊ ಅದನ್ನು ನಾವು ಒಪ್ಪಿಕೊಳ್ಳಲೇಬೇಕು’ ಎಂದಿದ್ದರು.

ಈ ಹೇಳಿಕೆ ಕುರಿತು ಬಾಗಲಕೋಟೆ ಜಿಲ್ಲೆಯ ಬಂಡಿಗಣಿ ಮಠದಲ್ಲಿ ಸುದ್ದಿಗಾರರು ಸೋಮವಾರ ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಹೈಕಮಾಂಡ್ ಆಶೀರ್ವಾದವೂ ಬೇಕು. ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗುವುದಕ್ಕೆ ಆಗುವುದಿಲ್ಲ. ಬಹುಮತ ಇದ್ದರೆ ಆಗಬಹುದು’ ಎಂದರು.

‘ಔತಣಕೂಟಕ್ಕೂ ಸಂಪುಟ ಪುನರ್ ರಚನೆಗೂ ಯಾವುದೇ ಸಂಬಂಧ ಇಲ್ಲ. ಆಗಾಗ ಊಟಕ್ಕೆ ಕರೆಯುತ್ತೇನೆ. ಊಟಕ್ಕೆ ಕರೆದಿದ್ದರಲ್ಲಿ ಯಾವುದೇ ವಿಶೇಷವಿಲ್ಲ. ನಿಮಗೆ (ಮಾಧ್ಯಮ) ಹಾಗೂ ಬಿಜೆಪಿಯವರಿಗೆ ವಿಶೇಷವಾಗಿದೆ’ ಎಂದು ನಕ್ಕರು.

ಶಾಸಕರ ಅಭಿಪ್ರಾಯ ಪಡೆದೇ ಆಯ್ಕೆ: ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ಸರ್ಕಾರ ರಚಿಸುವ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ (ಸಿಎಲ್ಪಿ) ನಾಯಕ ಅಂದರೆ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವಾಗ ಶಾಸಕರ ಅಭಿಪ್ರಾಯ ತೆಗೆದುಕೊಂಡು ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ವೀಕ್ಷಕರು ಹೈಕಮಾಂಡ್ಗೆ ತಲುಪಿಸುತ್ತಾರೆ. ಇಂಥವರ ಪರ ಇಷ್ಟು ಜನ ಇದ್ದಾರೆ ಎಂದು ಹೇಳುತ್ತಾರೆ. ಯಾರಿಗೆ ಬಹುಮತ ವ್ಯಕ್ತವಾಗುತ್ತದೆಯೊ ಆ ಹೆಸರು ಪ್ರಕಟಿಸಿ, ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆ’ ಎಂದರು.

‘ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದು ಇದೇ ರೀತಿಯಲ್ಲಿ. ಹಿಂದೆ ಎಸ್.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡುವಾಗಲೂ ಇದೇ ರೀತಿಯಲ್ಲಿ ಮಾಡಿದ್ದೇವೆ. ಶಾಸಕರ ಅಭಿಪ್ರಾಯ ತೆಗೆದುಕೊಳ್ಳುವುದು ಪದ್ಧತಿ. ಅಭಿಪ್ರಾಯ ತೆಗೆದುಕೊಳ್ಳುವುದಿಲ್ಲ ಎನ್ನುವುದು ಅವರಿಗೆ (ಹೈಕಮಾಂಡ್) ಬಿಟ್ಟಿದ್ದು. ಅದಕ್ಕೆ ನಾವು ಹೈಕಮಾಂಡ್ ತೀರ್ಮಾನ ಎನ್ನುವುದು. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಗೌರವ ಕೊಡುತ್ತಾರೆ’ ಎಂದೂ ಹೇಳಿದರು.

ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ‘ಶಾಸಕರ ಅಭಿಪ್ರಾಯದ ಮೇಲೆಯೇ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ವೀಕ್ಷಕರನ್ನು ಕಳುಹಿಸಿ ಎಲ್ಲವನ್ನೂ ತಿಳಿದುಕೊಂಡು ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದರು.

ಸಂಪುಟ ಪುನರ್ರಚನೆಯ ಸುಳಿವು

‘ಹೈಕಮಾಂಡ್ ನೀಡುವ ಸೂಚನೆ ಪಾಲಿಸಲು ಎಲ್ಲರೂ ಮಾನಸಿಕವಾಗಿ ಸಿದ್ಧರಾಗಬೇಕು’ ಎಂದು ಸಿದ್ದರಾಮಯ್ಯ ಅವರು ಸಂಪುಟ ಸಹೋದ್ಯೋಗಿಗಳಿಗೆ ಕಿವಿಮಾತು ಹೇಳಿದ್ದಾರೆ. ಬಿಹಾರ ವಿಧಾನಸಭೆಯ ಚುನಾವಣೆಯ ಬಳಿಕ ರಾಜ್ಯದ ಸಚಿವ ಸಂಪುಟ ಪುನರ್ರಚನೆ ಆಗಲಿದೆ ಎಂಬ ಸದ್ದು ಕಾಂಗ್ರೆಸ್ ಪಾಳಯದಲ್ಲಿ ಜೋರಾಗುತ್ತಿದೆ. ಈ ಮಧ್ಯೆಯೇ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿದ್ದರು. ಉಪಮುಖ್ಯಮಂತ್ರಿ ಶಿವಕುಮಾರ್ ಸೇರಿದಂತೆ ಬಹುತೇಕ ಸಚಿವರು ಭಾಗಿಯಾಗಿದ್ದರು. ಸಚಿವರ ಜೊತೆ ಮುಖ್ಯಮಂತ್ರಿ ಲೋಕಾಭಿರಾಮವಾಗಿ ಚರ್ಚೆ ನಡೆಸಿದರು. ‘ಬಿಹಾರ ವಿಧಾನಸಭೆ ಚುನಾವಣೆ ಕುರಿತು ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಹಿಂದಿ ಭಾಷೆ ಬಲ್ಲ ಸಚಿವರು ಸಕ್ರಿಯವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಬೇಕು. ಹೈಕಮಾಂಡ್ ನೀಡುವ ಜವಾಬ್ದಾರಿ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ಸಚಿವರ ಕಾರ್ಯವೈಖರಿಯ ಮೇಲೆ ಹೈಕಮಾಂಡ್ ನಿಗಾವಹಿಸಿದೆ. ಸಂಪುಟ ಪುನರ್ರಚನೆಯ ವೇಳೆ ಇದು ಪರಿಗಣನೆಗೆ ಬರಬಹುದು. ಈ ಬಗ್ಗೆ ಜಾಗ್ರತೆ ವಹಿಸುವಂತೆ ಸೂಚಿಸಿದರು’ ಎಂದು ಗೊತ್ತಾಗಿದೆ. ‘ಮುಂಬರುವ ಸ್ಥಳೀಯ ಸಂಸ್ಥೆಗಳು ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಕ್ರಿಯವಾಗಿ ಕೆಲಸ ಮಾಡಬೇಕು’ ಎಂದೂ ಸೂಚನೆ ನೀಡಿದರು ಎಂದೂ ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.