ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮೈಸೂರಿನಲ್ಲಿ ವೇದಿಕೆ ಹಂಚಿಕೊಂಡರು. ಸ್ವಾಭಿಮಾನಿಗೆ ಸಾವಿರದ ನುಡಿನಮನ ವಿ.ಶ್ರೀನಿವಾಸ ಪ್ರಸಾದ್ ಶ್ರದ್ಧಾಂಜಲಿ ಕಾರ್ಯಕ್ರಮ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು. ಕುಶಲೋಪರಿ ವಿಚಾರಿಸಿದ ನಾಯಕರು, ಅಕ್ಕಪಕ್ಕದ ಕುರ್ಚಿಯಲ್ಲಿ ಆಸೀನರಾಗಿದ್ದರು. ಯಡಿಯೂರಪ್ಪ ಅವರು ನೀಡಿದ ಚೀಟಿಯನ್ನು ಮುಖ್ಯಮಂತ್ರಿ ತಮ್ಮ ಶರ್ಟ್ ಜೇಬಿಗೆ ಇಟ್ಟುಕೊಂಡರು. ಆ ಚೀಟಿಯ ಬಗ್ಗೆ ಕೆಲ ಹೊತ್ತು ಮಾತುಕತೆ ನಡೆಸಿದರು. ಆದರೆ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಮುಖ್ಯಮಂತ್ರಿ ಬರುವುದಕ್ಕೆ ಮುನ್ನವೇ ಮಾತನಾಡಿ ಕಾರ್ಯಕ್ರಮದಿಂದ ತರಾತುರಿಯಲ್ಲಿ ನಿರ್ಗಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.