ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ 13ರಂದು ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಅಹವಾಲು ಆಲಿಸಲಿದ್ದಾರೆ.

'ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮುಖ್ಯಮಂತ್ರಿ ಮತ್ತು ನಾನು ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಕುಂದುಕೊರತೆ ಮತ್ತು ಅಹವಾಲು ಆಲಿಸಲಿದ್ದೇವೆ. ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.