ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜುಲೈ 6ರಂದು ಸಿಎಂ, ಡಿಸಿಎಂ ‘ಕೈ’ ಕಾರ್ಯಕರ್ತರ ಭೇಟಿ

Published 4 ಜುಲೈ 2024, 15:48 IST
Last Updated 4 ಜುಲೈ 2024, 15:48 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ (ಜುಲೈ 6) ಮಧ್ಯಾಹ್ನ 3ರಿಂದ ಸಂಜೆ 5 ಗಂಟೆವರೆಗೆ ಭೇಟಿ ಮಾಡಿ ಅಹವಾಲು ಆಲಿಸಲಿದ್ದಾರೆ.

‘ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿಗೆ ಅವಕಾಶ ಕಲ್ಪಿಸಲಾಗಿದ್ದು, ಭೇಟಿಗೆ ಬಯಸುವವರು ಮೊಬೈಲ್ ಸಂಖ್ಯೆ 7899116899 ಅನ್ನು ಸಂಪರ್ಕಿಸಿ ಹೆಸರು ಮತ್ತು ಪಕ್ಷದಲ್ಲಿನ ಹುದ್ದೆಯ ವಿವರಗಳ ಸಹಿತ ನೋಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ ಮೊದಲು ಭೇಟಿಗೆ ಅವಕಾಶ ನೀಡಲಾಗುವುದು’ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

‘ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸೀಮಿತವಾಗಿ ಈ ಭೇಟಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹೀಗಾಗಿ, ಶಾಸಕರು ಸೇರಿದಂತೆ ಇತರರು ಬರುವಂತಿಲ್ಲ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT