ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರು ಪ್ರತ್ಯೇಕವಾಗಿ ನವದೆಹಲಿಗೆ ಬುಧವಾರ ಬಂದಿದ್ದಾರೆ. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಗುರುವಾರ ಚರ್ಚೆ ನಡೆಸಲಿದ್ದಾರೆ. ನಂತರ, ಉಭಯ ನಾಯಕರು ಖರ್ಗೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.