ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿ.ನರಸೀಪುರ ಬಳಿ ಕಾರು –ಬಸ್ ಅಪಘಾತ: ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಣೆ

Published 29 ಮೇ 2023, 12:38 IST
Last Updated 29 ಮೇ 2023, 12:38 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ಕಾರು –ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು‌. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಅಪಘಾತದಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬಳ್ಳಾರಿ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ನಜ್ಜುಗುಜ್ಜಾಗಿದೆ.

ಮೈಸೂರು - ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ಕುರುಬೂರು ಸಮೀಪದ ಪಿಂಜರಾಪೋಲ್ ಬಳಿ ನಡೆದಿದೆ. ಕಾರಿನಲ್ಲಿ ಇಬ್ಬರು ಮಕ್ಕಳು ಹಾಗೂ ಮಹಿಳೆಯರು ಸೇರಿ 13 ಮಂದಿ ಇದ್ದರು ಎನ್ನಲಾಗಿದೆ. ಖಾಸಗಿ ಬಸ್‌ ಕೊಳ್ಳೇಗಾಲದ ಕಡೆಗೆ ಹೋಗುತ್ತಿತ್ತು. ಮೃತರ ವಿವರ ಲಭ್ಯವಾಗಿಲ್ಲ. ಸ್ಥಳೀಯರ ನೆರವಿನಲ್ಲಿ ಶವಗಳನ್ನು ಹೊರ ತೆಗೆಯಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT