ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಷ್ಟಗಿ ಬಳಿ ಅಪಘಾತ: ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

Published 28 ಮೇ 2023, 16:03 IST
Last Updated 28 ಮೇ 2023, 16:03 IST
ಅಕ್ಷರ ಗಾತ್ರ

ಬೆಂಗಳೂರು: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ ₹2ಲಕ್ಷ ಪರಿಹಾರ ಘೋಷಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಸಿಎಂ ತಿಳಿಸಿದ್ದಾರೆ.

‘ವೇಗವಾಗಿ ಬರುತ್ತಿದ್ದ ಕಾರಿನ ಟಯರ್‌ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT