ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 25ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಸರ್ಕಾರದ ಅಪರ ಕಾರ್ಯದರ್ಶಿ ಕೆ. ಚಿರಂಜೀವಿ ಅವರು ಸಭೆಗೆ ಸಂಬಂಧಿಸಿದ ಸೂಚನಾ ಪತ್ರ ಪ್ರಕಟಿಸಿದ್ದಾರೆ. ಸಂಬಂಧಿತ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಪ್ರಜಾವಾಣಿ ಸೇರಿದಂತೆ ಹಲವು ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿವೆ. ಇದರಿಂದ ಎಚ್ಚೆತ್ತಿರುವ ಸಿಎಂ, ಶನಿವಾರ ಸಭೆ ಕರೆದಿದ್ದಾರೆ. ಬೆಳಿಗ್ಗೆ 11ಕ್ಕೆ ಸಭೆ ಆರಂಭವಾಗಲಿದೆ.
.ಒಳನೋಟ | ಸಾಲದ ‘ಶೂಲ’ಕ್ಕೆ ಕಂಗಾಲು.ಖಾಸಗಿ ಫೈನಾನ್ಸ್ಗಳಿಂದ ವಂಚನೆ; ಸಂತ್ರಸ್ತೆಯರಿಂದ 7.80 ಲಕ್ಷ ದೂರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.