ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಡಿಗೆದಾರರಿಗೂ ಉಚಿತ ವಿದ್ಯುತ್: ಮುಖ್ಯಮಂತ್ರಿ ಸಿದ್ದರಾಮಯ್ಯ

Published 6 ಜೂನ್ 2023, 6:00 IST
Last Updated 6 ಜೂನ್ 2023, 6:00 IST
ಅಕ್ಷರ ಗಾತ್ರ

ಬೆಂಗಳೂರು: ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು. ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಂಗಳವಾರ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹುತೇಕ ಬಡವರಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ವಾಣಿಜ್ಯ ಉದ್ದೇಶದ ಬಾಡಿಗೆ ಹೊರತುಪಡಿಸಿ ಎಲ್ಲ ಬಾಡಿಗೆ ಗೃಹಗಳಿಗೂ ಉಚಿತ ವಿದ್ಯುತ್ ದೊರೆಯಲಿದೆ ಎಂದರು.

ಬಿಜೆಪಿ ನಾಯಕರು ಹಿಂದೆ ನೀಡಿದ್ದ ಭರವಸೆಗಳನ್ನು ನಾಲ್ಕು ವರ್ಷಗಳಲ್ಲಿ ಈಡೇರಿಸಲಿಲ್ಲ. ನೀರಾವರಿಗೆ ₹1.50 ಲಕ್ಷ ವಿನಿಯೋಗಿಸಲಿಲ್ಲ. ರೈತರ ಸಾಲ ಮನ್ನಾಮಾಡಲಿಲ್ಲ. ಇದರಿಂದ ಜನರು ಅವರನ್ನು ಮನೆಗೆ ಕಳುಹಿಸಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕೊಟ್ಟ ಭರವಸೆ ಈಡೇರಿಸಿದೆ. ಅದನ್ನು ಸಹಿಸದೇ ಟೀಕೆ ಮಾಡುತ್ತಿದ್ದಾರೆ ಎಂದು ದೂರಿದರು.

ಹಿಂದೆಯೂ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿತ್ತು. ಈಗಲೂ ಭರವಸೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಪಠ್ಯ ಪರಿಷ್ಕರಣೆ, ಎನ್ ಇಪಿ ಕುರಿತು ತಜ್ಞರ ಜತೆ ಚರ್ಚಿಸಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ... ಗೃಹ ಜ್ಯೋತಿ, ಶಕ್ತಿ ಯೋಜನೆಗಳಿಗೆ ಮಾರ್ಗಸೂಚಿ: ಬಾಡಿಗೆದಾರರಿಗೆ ಸಿಗುವುದೇ ಗ್ಯಾರಂಟಿ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT